ವಿಜಯಪುರ:ಆಲಮಟ್ಟಿಗೆ ಸಿಎಂ ಆಗಮಿಸುವ ಹಿನ್ನೆಲೆಯಲ್ಲಿ ಆಲಮಟ್ಟಿ ಸುತ್ತಮುತ್ತ ಬಿಜೆಪಿ ಕಾರ್ಯಕರ್ತರು ಸ್ವಾಗತ ಬ್ಯಾನರ್ ಅಳವಡಿಸಲು ಮುಂದಾದಾಗ ಪೊಲೀಸರು ಅಡ್ಡಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವೇಳೆ, ಬಿಜೆಪಿ ಕಾರ್ಯಕರ್ತರು - ಪೊಲೀಸರ ಮಧ್ಯೆ ಮಾತಿನ ಚಕಮಕಿ ಸಹ ನಡೆದಿದೆ.
ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ ಬೆಂಬಲಿಗರಿಗೆ ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿಲಾಗಿದೆ. ಘಟನೆ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ಮುಂಭಾಗದಲ್ಲಿ ನಡೆದಿದೆ.