ವಿಜಯಪುರ:ಮುದ್ದೇಬಿಹಾಳ ಪಟ್ಟಣದ ಮಾರುತಿ ನಗರದಲ್ಲಿರುವ ಅಲ್ಪಸಂಖ್ಯಾತರ ವಸತಿ ನಿಲಯಕ್ಕೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿರುವ ಕ್ವಾರಂಟೈನ್‌ನಲ್ಲಿರುವವರನ್ನ ಸ್ಥಳಾಂತರ ಮಾಡುವ ಕ್ರಮಕ್ಕೆ ಇಲ್ಲಿನ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮುದ್ದೇಬಿಹಾಳ ಪಟ್ಟಣದ ಆಸ್ಪತ್ರೆಯಲ್ಲಿ ಈಗಾಗಲೇ ಕ್ವಾರಂಟೈನ್ನಲ್ಲಿರುವ 9 ಜನ ತಮದಡ್ಡಿಯ ಜನರನ್ನ ಜನವಸತಿ ಪ್ರದೇಶವಾಗಿರುವ ಮಾರುತಿ ನಗರದ ವಸತಿ ನಿಲಯಕ್ಕೆ ಸ್ಥಳಾಂತರ ಮಾಡಲು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದರು. ಈ ಸುದ್ದಿ ತಿಳಿದ ಜನರು ಸ್ಥಳಕ್ಕೆ ಆಗಮಿಸಿ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು. ನೆಮ್ಮದಿಯಾಗಿ ಜೀವ ನಡೆಸುತ್ತಿರುವ ನಮ್ಮ ನಗರಕ್ಕೆ ಕ್ವಾರಂಟೈನ್‌ನಲ್ಲಿರುವವರನ್ನ ಸ್ಥಳಾಂತರ ಮಾಡುವುದು ಸರಿಯಲ್ಲ. ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.