ವಿಜಯಪುರ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮಹಿಳಾ ಒಕ್ಕೂಟದ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಸಿದರು. ಕೇಂದ್ರ ಸರ್ಕಾರ ದೇಶವಾಸಿಗಳ ಭಾವನೆಗಳಿಗೆ ಧಕ್ಕೆ ತರುವ ನೀತಿಗಳನ್ನು ಜಾರಿ ಮಾಡುತ್ತಿದೆ. ಪೌರತ್ವ ಕಾಯ್ದೆಯಿಂದ ದೇಶದದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.
ಮುಸ್ಲಿಂ ಮಹಿಳಾ ಒಕ್ಕೂಟ ಕಾರ್ಯಕರ್ತೆಯರ ಪ್ರತಿಭಟನೆ ಅಸಂಖ್ಯಾತ ಜನ್ರು ಪೌರತ್ವ ಕಾಯ್ದೆಗೆ ಆಕ್ರೋಶ ವ್ಯಕ್ತಪಡಿಸುವಂತಾಗಿದೆ. ಕೇಂದ್ರ ಮಾತ್ರ ಕಾಯ್ದೆ ರದ್ದು ಮಾಡಲು ಮುಂದಾಗುತ್ತಿಲ್ಲ ಎಂದು ಪ್ರತಿಭಟನಾಕಾರು ಕಿಡಿಕಾರಿದರು.
45ಕ್ಕೂ ಅಧಿಕ ದಿನಗಳಿಂದ ನಗರದ ಶಾಹೀನ್ ಭಾಗ್ನಲ್ಲಿ ನಿರಂತರ ಧರಣಿ ನಡೆಸಲಾಗುತ್ತಿದೆ. ಆದ್ರೆ ಧರಣಿಗೆ ಅನುಮತಿ ನೀಡಿದ ಕಾಲಾವಧಿ ಮುಗಿದ ಕಾರಣ ಮುಸ್ಲಿಂ ಮಹಿಳಾ ಒಕ್ಕೂಟದ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.