ಕರ್ನಾಟಕ

karnataka

ವಿದ್ಯಾಗಮ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ತರಗತಿ ಆರಂಭಕ್ಕೆ ಆಕ್ರೋಶ

ಕೊರೊನಾ ವೈರಸ್​ ಹಿನ್ನೆಲೆ, ಯಾವುದೇ ತರಗತಿ ನಡೆಸಬಾರದೆಂಬ ಆದೇಶವಿದ್ದರೂ ಸರ್ಕಾರಿ ಶಾಲೆಗಳು ವಿದ್ಯಾಗಮ ಆಯೋಜನೆ ಹೆಸರಿನಲ್ಲಿ ತರಗತಿ ನಡೆಸುತ್ತಿವೆ ಎಂದು ಆರೋಪಿಸಿ ಜಿಲ್ಲಾ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಆಡಳಿತ ಮಂಡಳಿ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

By

Published : Aug 24, 2020, 7:55 PM IST

Published : Aug 24, 2020, 7:55 PM IST

Outrage for opening of government schools in the name of Vidyagama
ವಿದ್ಯಾಗಮ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ತರಗತಿ ಆರಂಭಕ್ಕೆ ಆಕ್ರೋಶ

ವಿಜಯಪುರ:ರಾಷ್ಟ್ರೀಯ ವಿಪತ್ತು ಕಾಯ್ದೆ ಉಲ್ಲಂಘಿಸಿ ಸರ್ಕಾರಿ ಶಾಲೆಗಳು ವಿದ್ಯಾಗಮ ಯೋಜನೆ ಹೆಸರಿನಲ್ಲಿ ತರಗತಿ ನಡೆಸುತ್ತಿವೆ ಎಂದು ಆರೋಪಿಸಿ ಜಿಲ್ಲಾ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಆಡಳಿತ ಮಂಡಳಿ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಿದ್ಯಾಗಮ ಹೆಸರಿನಲ್ಲಿ ಸರ್ಕಾರಿ ಶಾಲೆಗಳ ತರಗತಿ ಆರಂಭಕ್ಕೆ ಆಕ್ರೋಶ

ಕೊರೊನಾ ವೈರಸ್​ ಹಿನ್ನೆಲೆ, ಯಾವುದೇ ತರಗತಿ ನಡೆಸಬಾರದೆಂಬ ಆದೇಶವಿದ್ದರೂ ಸರ್ಕಾರಿ ಶಾಲೆಯ ಮಕ್ಕಳು ಕಲಿಕೆಯಿಂದ ಹಿಂದೆ ಉಳಿಯಬಾರದೆಂದು ಜಿಲ್ಲೆಯ ಕೆಲವು ಸರ್ಕಾರಿ ಶಾಲೆಗಳಲ್ಲಿ ನಿಯಮ ಬಾಹಿರವಾಗಿ ತರಗತಿ ನಡೆಸಲಾಗುತ್ತಿದೆ. ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಾಲೆ ಆರಂಭಸಿಲು ಅನುಮತಿ ನೀಡದೆ, ಕೇವಲ ಸರ್ಕಾರಿ ಶಾಲೆಗಳಲ್ಲಿ ತರಗತಿ ನಡೆಸಲು ಅನುಮತಿ ನೀಡಿ ಮಲತಾಯಿ ಧೋರಣೆ ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಇನ್ನೂ ತರಗತಿ ಆರಂಭಿಸಿರುವ ಶಾಲೆಯ ಒಳಗೆ-ಹೊರಗೆ ಯಾವುದೇ ಸುರಕ್ಷಿತಾ ಕ್ರಮಗಳನ್ನು ಕೈಗೊಂಡಿಲ್ಲ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details