ವಿಜಯಪುರ: ಸಮಾಜಮುಖಿ ಸೇವೆಗಳಿಂದ ಹೆಸರಾಗಿರುವ ಶಿವಮೊಗ್ಗದ ಗುರುಶಾಂತ ವೀರೇಶ್ವರ ಸೇವಾ ಸಮಿತಿ ವತಿಯಿಂದ ವಿಜಯಪುರ ನಗರದ ಲಿಂಗಾಯತ ಸಮುದಾಯ ಭವನದಲ್ಲಿ ಫೆ.26 ರ ಭಾನುವಾರ ಬೆಳಗ್ಗೆ 11ಕ್ಕೆ ವೀರಶೈವ ಲಿಂಗಾಯತ ವಧು-ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಕಾರ್ಯದರ್ಶಿ ಮಹಾಲಿಂಗಯ್ಯ ಶಾಸ್ತ್ರಿ ಎಸ್.ನಂದಗಾಂವಿ ಮಠ ಹೇಳಿದರು.
ಶುಕ್ರವಾರ ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 22 ವರ್ಷಗಳ ಹಿಂದೆ ಶಿವಮೊಗ್ಗದಲ್ಲಿ ಸ್ಥಾಪನೆಯಾದ ಈ ಸಮಿತಿ ಸಮಾಜಮುಖಿ ಸೇವಾ ಟ್ರಸ್ಟ್ ಆಗಿದೆ. ಇದರಿಂದ ಲಿಂಗಾಯತ ಸಮುದಾಯಕ್ಕೆ ಹಲವು ಕೊಡುಗೆಗಳನ್ನು ನೀಡಲಾಗಿದೆ. ಸಮಾಜಕ್ಕೂ ಹಲವಾರು ಕೊಡುಗೆಗಳನ್ನು ಕೊಡುತ್ತಾ ಬಂದಿದ್ದು ಈಗ ರಾಜ್ಯದ 14 ಶಾಖೆಗಳಲ್ಲಿ ವೀರಶೈವ ಲಿಂಗಾಯತ ಸಮಾಜಕ್ಕೆ ಅನುಕೂಲ ಆಗಲಿ ಎಂದು ರಾಜ್ಯಾದ್ಯಂತ ವೀರಶೈವ ಲಿಂಗಾಯತ ವಧು-ವರರ ಸಮಾವೇಶ ಹಮ್ಮಿಕೊಳ್ಳುತ್ತಿದ್ದೇವೆ. ಶಿವಮೊಗ್ಗ, ಸಾಗರ, ದಾವಣಗೆರೆ, ಹುಬ್ಬಳ್ಳಿ, ಬೆಂಗಳೂರು, ಮೈಸೂರು, ಬೆಳಗಾವಿಗಳಲ್ಲಿಯೂ ಕಾರ್ಯಕ್ರಮ ಮಾಡಿದ್ದೇವೆ. ಇದೀಗ 26ನೇ ತಾರೀಖಿನಂದು ಕೊನೆಯದಾಗಿ ವಿಜಯಪುರದಲ್ಲಿಯೂ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದರು.
ಕಾರ್ಯಕ್ರಮಕ್ಕೆ ಡಾಕ್ಟರ್ಸ್, ಇಂಜಿನಿಯರ್, ವಾಣಿಜ್ಯೋದ್ಯಮಿಗಳು ಸೇರಿದಂತೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿಯೂ ಓದುವುದರಲ್ಲಿ ಮೊದಲಿದ್ದವರು ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಆಗಮಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಇದನ್ನೂ ಓದಿ :'ರಾಜಕಾರಣಕ್ಕೆ ದೇವೇಗೌಡರು ಆದರ್ಶ': ವಿದಾಯ ಭಾಷಣದಲ್ಲಿ ಬಿ.ಎಸ್.ಯಡಿಯೂರಪ್ಪ