ವಿಜಯಪುರ : ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾದ ಹಿನ್ನೆಲೆ, ಜಿಲ್ಲೆಯ ಗಡಿಭಾಗ ಧೂಳಖೇಡ ಗಡಿಯಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಕೋವಿಡ್ ನೆಗೆಟಿವ್ ವರದಿ ತಂದವರಿಗೆ ಮಾತ್ರ ಕರ್ನಾಟಕ ಪ್ರವೇಶಕ್ಕೆ ಅವಕಾಶ ನೀಡುತ್ತಿರುವುದರಿಂದ, ಕೋವಿಡ್ ರಿಪೋರ್ಟ್ ಇಲ್ಲದ ಪ್ರಯಾಣಿಕರು ಪರದಾಡುವಂತಾಯಿತು. ಕೋವಿಡ್ ನೆಗೆಟಿವ್ ವರದಿ ಇಲ್ಲದೆ ಮಹಾರಾಷ್ಟ್ರದ ಪ್ರಯಾಣಿಕರು ಕರ್ನಾಟಕ ಪ್ರವೇಶ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಆರೋಗ್ಯ ಸಿಬ್ಬಂದಿ ಕಠಿಣ ಕ್ರಮ ಕೈಗೊಂಡಿದ್ದಾರೆ.
ಓದಿ : ಮಹಾರಾಷ್ಟ್ರದಲ್ಲಿ ಹೆಚ್ಚಳಗೊಂಡ ಕೊರೊನಾ.. ಬೆಳಗಾವಿ ಗಡಿಯಲ್ಲಿ ಮುಂದುವರೆದ ಕಟ್ಟೆಚ್ಚರ..
ಕೋವಿಡ್ ವರದಿ ಇಲ್ಲದವರನ್ನು ಧೂಳಖೇಡ್ನಿಂದಲೇ ವಾಪಸ್ ಕಳುಹಿಸಲಾಗುತ್ತಿದೆ. ಮದುವೆ, ಅಂತ್ಯಕ್ರಿಯೆ ಸೇರಿದಂತೆ ತುರ್ತು ಕಾರ್ಯ ಇದ್ದವರ ಮಾಹಿತಿ ಪಡೆದು, ಆರೋಗ್ಯ ತಪಾಸಣೆ ನಡೆಸಿ ರಾಜ್ಯ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ.
ಜ್ವರ, ಕೆಮ್ಮು, ನೆಗಡಿ ಇದ್ದವರಿಗೆ ರಾಜ್ಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕೋವಿಡ್ ವರದಿ ಇದ್ದ ಪ್ರಯಾಣಿಕರಗೆ, ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ.