ವಿಜಯಪುರ: ಪಾದಚಾರಿ ಮೇಲೆ ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿ ನಡೆದಿದೆ.
ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ಸಾವು: ದೃಶ್ಯ ಭಯಾನಕ - ವಿಜಯಪುರ ಕ್ರೈಮ್ ಲೆಟೆಸ್ಟ್ ನ್ಯೂಸ್
ರಸ್ತೆ ದಾಟುತ್ತಿದ್ದ ವೇಳೆ ವ್ಯಕ್ತಿ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬ.ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ನಲ್ಲಿ ನಡೆದಿದೆ.
ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ಸಾವು
ಮಹಾದೇವ ಮಾದರ್ (35) ಮೃತ ದುರ್ದೈವಿ. ಈತ ಹೆಬ್ಬಾಳ ಹಂಗರಗಿ ಗ್ರಾಮದ ನಿವಾಸಿಯಾಗಿದ್ದು, ರಸ್ತೆ ದಾಟುತ್ತಿದ್ದ ವೇಳೆ ರಭಸವಾಗಿ ಬಂದ ಲಾರಿ ವ್ಯಕ್ತಿ ಮೇಲೆ ಹರಿದಿದೆ. ಪರಿಣಾಮ ವ್ಯಕ್ತಿ ದೇಹ ನುಜ್ಜುಗುಜ್ಜಾಗಿದೆ.
ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.