ವಿಜಯಪುರ:ಆಲಮಟ್ಟಿ ಜಲಾಶಯದ ಒಳಹರಿವು ಹಾಗೂ ಹೊರ ಹರಿವು ಸಮಾನ ರೀತಿಯಲ್ಲಿದ್ದು ಯಾವುದೇ ರೀತಿಯಿಂದ ನದಿ ವ್ಯಾಪ್ತಿಯ ನಾಗರಿಕರು ಭಯಪಡುವ ಅವಶ್ಯಕತೆ ಇಲ್ಲ. ಪ್ರವಾಹದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದ್ದಾರೆ.
ಸದ್ಯ ಜಲಾಶಯದಲ್ಲಿ ಕಳೆದ ಸಾಲಿನ ಭರ್ತಿಯನ್ನು ಹೋಲಿಸಿದಲ್ಲಿ ನೀರು ಕಡಿಮೆ ಇದೆ. ಜಲಾಶಯಕ್ಕೆ ಸಂಬಂಧಿಸಿದಂತೆ ಹಾಗೂ ಪ್ರವಾಹದ ಮುನ್ನೆಚ್ಚರಿಕೆಯಾಗಿ ಮುದ್ದೇಬಿಹಾಳ, ನಿಡಗುಂದಿ ಹಾಗೂ ಬಬಲೇಶ್ವರ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಡಂಗೂರ ಬಾರಿಸುವುದು, ಸಾರ್ವಜನಿಕರಿಗೆ ಮಾಹಿತಿಯನ್ನು ನೀಡುವ ಕಾರ್ಯ ಮಾಡಲಾಗುತ್ತಿದೆ. ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಹಾಗೂ ಬೋಟ್‌ಗಳ ವ್ಯವಸ್ಥೆಯ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.