ಕರ್ನಾಟಕ

karnataka

ETV Bharat / state

ಭೀಮಾ, ಕೃಷ್ಣಾ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ: ಜಿಲ್ಲಾಧಿಕಾರಿ - District Collector P.Sunila Kumara

ಭೀಮಾನದಿ ಹಾಗೂ ಕೃಷ್ಣಾ ನದಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ಪಾತ್ರಕ್ಕೆ ಜನ, ಜಾನುವಾರು ಹೋಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಸೂಚನೆ ನೀಡಿದ್ದಾರೆ.

Vijayapura
ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ

By

Published : Aug 20, 2020, 9:03 PM IST

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಭೀಮಾನದಿ ಹಾಗೂ ಕೃಷ್ಣಾ ನದಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಹಾಗಾಗಿ, ನದಿ ಪಾತ್ರಕ್ಕೆ ಜನ, ಜಾನುವಾರು ಹೋಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಸೂಚನೆ ನೀಡಿದ್ದಾರೆ.

ಭೀಮಾನದಿ ಹಾಗೂ ಕೃಷ್ಣಾ ನದಿ ಪಾತ್ರದ ಜನರಿಗೆ ಎಚ್ಚರಿಕೆ

ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿ ಪಾತ್ರಕ್ಕೆ 2.50 ಲಕ್ಷ ಕ್ಯುಸೆಕ್​ ನೀರನ್ನು ಹರಿಬಿಡಲಾಗುತ್ತಿದ್ದು, ಭೀಮಾ ನದಿಯಲ್ಲಿ 13.675 ಕ್ಯುಸೆಕ್​ ನೀರು ಹರಿಯುತ್ತಿದೆ. ಆದ್ದರಿಂದ ನದಿ ಪಾತ್ರದ ಎಲ್ಲಾ ಗ್ರಾಮಗಳಲ್ಲಿ ಪರಿಹಾರ ಕಾರ್ಯಕ್ಕೆ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲಾಡಳಿತದಿಂದ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಎರಡೂ ನದಿ ಪಾತ್ರದ ಜನರು ಧೈರ್ಯ ಹಾಗೂ ಜಾಗರೂಕತೆಯಿಂದಿರಲು ಮತ್ತು ಪರಿಹಾರ ಕಾರ್ಯಕ್ಕಾಗಿ ಜಿಲ್ಲಾಧಿಕಾರಿಗಳ ಕಚೇರಿಯ 24/7 ಕಂಟ್ರೋಲ್ ರೂಂ ಫೋನ್ ನಂಬರ್ – 08352-221216 ಹಾಗೂ ಟೋಲ್ ಫ್ರೀ ನಂಬರ್ 1077 ಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details