ಮುದ್ದೇಬಿಹಾಳ: ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಹೆಚ್ಚಿನ ಕ್ರಮ ಕೈಗೊಂಡಿದೆ. ಈ ಅಭಿಯಾನದಲ್ಲಿ ನಾಗರಿಕರೂ ಸಹ ಕೈ ಜೋಡಿಸಿದ್ರೆ ಅದರ ನಿಯಂತ್ರಣ ಸಾಧ್ಯ ಎಂದು ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ ಹೇಳಿದರು.
ಪುರಸಭೆ ಆಡಳಿತದ ಹುಡ್ಕೋ ಬಡಾವಣೆಯಲ್ಲಿರುವ ಹಸಿರು ತೋರಣ ಉದ್ಯಾನವನದಲ್ಲಿ ಕೊವಿಡ್ -19 ನಿಯಂತ್ರಣಕ್ಕಾಗಿ ಹಮ್ಮಿಕೊಂಡಿದ್ದ ವಾರ್ಡ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಸರ್ಕಾರ ನಾಗರಿಕರನ್ನು ಒಳಗೊಂಡ ಸಮಿತಿ ರಚಿಸಿದೆ. ಇದರಲ್ಲಿ ಅವರೂ ಸಕ್ರಿಯವಾಗಿ ಪಾಲ್ಗೊಂಡು ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು.