ವಿಜಯಪುರ:ಸಮುದಾಯ ಭವನ ಹಾಗೂ ಹಾಸ್ಟೆಲ್‌ಗಳಲ್ಲಿ ಕೊರೊನಾ ಸೋಂಕಿನ ಲಕ್ಷಣ ಇರುವ ಜನರನ್ನು ಕ್ವಾರಂಟೈನ್ ಮಾಡದಂತೆ ಸ್ಥಳೀಯ ನಾಗರಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಕೊರೊನಾ ಶಂಕಿತರನ್ನು ಸಮುದಾಯ ಭವನಗಳಲ್ಲಿ ಕ್ವಾರಂಟೈನ್ ಮಾಡದಂತೆ ಮನವಿ - ವಿಜಯಪುರ ನಗರದ ಸಮುದಾಯ ಭವನ
ವಿಜಯಪುರ ನಗರದ ಸಮುದಾಯ ಭವನಗಳಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಸಿದ್ದತೆ ನಡೆಸಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದಾಗಿ ಶಂಕಿತರನ್ನು ಈ ಸ್ಥಳಗಳಲ್ಲಿ ಕ್ವಾರಂಟೈನ್ ಮಾಡುವುದು ಬೇಡ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
![ಕೊರೊನಾ ಶಂಕಿತರನ್ನು ಸಮುದಾಯ ಭವನಗಳಲ್ಲಿ ಕ್ವಾರಂಟೈನ್ ಮಾಡದಂತೆ ಮನವಿ People urges DC](https://etvbharatimages.akamaized.net/etvbharat/prod-images/768-512-8388841-712-8388841-1597226363487.jpg)
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರ್ವಜನಿಕರು
ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರ್ವಜನಿಕರು
ನಗರದ ಬಜಾರ ಸಮುದಾಯ ಭವನದಲ್ಲಿ ಕೊರೊನಾ ಶಂಕಿತರನ್ನು ಜಿಲ್ಲಾಡಳಿತದ ವತಿಯಿಂದ ಕ್ವಾರಂಟೈನ್ ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಜನ ದಟ್ಟಣೆ ಪ್ರದೇಶದಲ್ಲಿ ಕ್ವಾರಂಟೈನ್ ಮಾಡಿದರೆ ಸ್ಥಳೀಯ ನಿವಾಸಿಗಳಿಗೆ ವೈರಸ್ ಭೀತಿ ಎದುರಾಗಲಿದೆ ಹಾಗೂ ವಯೋವೃದ್ದರು ಮತ್ತು ಮಕ್ಕಳಿಗೆ ಭಯದ ವಾತಾವರಣ ನಿರ್ಮಾಣವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಾರ್ವಜನಿಕರ ಒಳಿತಗಾಗಿ ಹಾಗೂ ಅವರಲ್ಲಿ ಕೊರೊನಾ ಬಗ್ಗೆ ಭಯ ಮೂಡಿಸದಿರಲು ವಸತಿ ನಿಲಯ ಹಾಗೂ ಸಮುದಾಯ ಭವನಗಳಲ್ಲಿ ಸೋಂಕಿತರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡದಂತೆ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಲಾಯಿತು.
TAGGED:
People urges DC