ವಿಜಯಪುರ:ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯಿಸಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐಗೆ ವಹಿಸಿ: ಶಾಸಕ ಯತ್ನಾಳ್ ಒತ್ತಾಯ - ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು
ಫೋನ್ ಕದ್ದಾಲಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಬಿ ಎಸ್ ಯಡಿಯೂರಪ್ಪರಿಗೆ ಒತ್ತಾಯಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ ಯತ್ನಾಳ್
ನಗರದಲ್ಲಿ ಮಾತನಾಡಿದ ಶಾಸಕರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಿಎಂ ಬಿ ಎಸ್ ಯಡಿಯೂರಪ್ಪರಿಗೆ ಮನವಿ ಮಾಡಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಸಚಿವ ಸ್ಥಾನಕ್ಕೆ ಯಾರ ಮನೆಗೂ ಹೋಗಿಲ್ಲ, ದೆಹಲಿಗೆ ತೆರಳಿ ಲಾಬಿ ಮಾಡಿಲ್ಲ. ಬಿಜೆಪಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಿದ್ದೇನೆ ಎಂದರು.