ವಿಜಯಪುರ ಜಿಲ್ಲೆಯಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಒತ್ತಾಯ
ವಿವಿಧ ಇಲಾಖೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ವಿಜಯಪುರದಲ್ಲೇ ಪರೀಕ್ಷಾ ಕೇಂದ್ರ ಸ್ಥಾಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪದವೀಧರ ಒಕ್ಕೂಟದ ಕಾರ್ಯಕರ್ತರು ಮನವಿ ಮಾಡಿದ್ದಾರೆ.
ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸುವಂತೆ ಒತ್ತಾಯ
ವಿಜಯಪುರ: ಕೆಪಿಎಸ್ಸಿ, ಕೆಇಎ ವಿವಿಧ ಇಲಾಖೆಗಳಿಗೆ ನಡೆಸುವ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳನ್ನ ಗುಮ್ಮಟನಗರಿಯಲ್ಲಿ ಸ್ಥಾಪಿಸುವಂತೆ ರಾಜ್ಯ ಪದವೀಧರ ಒಕ್ಕೂಟದ ಕಾರ್ಯಕರ್ತರು ಮನವಿ ಸಲ್ಲಿಸಿದರು.
ವಿವಿಧ ಇಲಾಖೆಗಳ ಪರೀಕ್ಷಾ ಕೇಂದ್ರಗಳನ್ನ ವಿಜಯಪುರ ಜಿಲ್ಲೆಯಲ್ಲಿ ಸ್ಥಾಪಿಸುವಂತೆ ಮುಂಬರುವ ಅಧಿವೇಶನದಲ್ಲಿ ಒತ್ತಾಯಿಸುವಂತೆ ಪದವೀಧರ ಸಂಘಟನೆ ಕಾರ್ಯಕರ್ತರು ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಅವರಿಗೂ ಮನವಿ ಸಲ್ಲಿಸಿದ್ರು.