ಪೊಲೀಸ್ ಹುತಾತ್ಮ ದಿನಾಚರಣೆ: ಕರ್ತವ್ಯದ ವೇಳೆ ಮಡಿದ ಆರಕ್ಷಕರಿಗೆ ಗೌರವ ವಂದನೆ - ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ
ವಿಜಯಪುರ ಪೊಲೀಸ್ ಮೈದಾನದಲ್ಲಿ ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ನಮನ ಸಲ್ಲಿಸಲಾಯ್ತು. ಇದೇ ವೇಳೆ ಕೊರೊನಾ ವಿರುದ್ಧ ಹೋರಾಡಿ ಮೃತರಾದ ಪೊಲೀಸರ ಕುಟುಂಬಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯ ಒದಗಿಸುವ ಕೆಲಸ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.

ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸರಿಗೆ ಗೌರವ ವಂದನೆ
ವಿಜಯಪುರ: ಕೊರೊನಾ ಆರಂಭದ ದಿನಗಳಿಂದಲೂ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಸೇವೆ ಅಮೂಲ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.
ಪೊಲೀಸ್ ಹುತಾತ್ಮ ದಿನಾಚರಣೆ
ಕರ್ತವ್ಯದ ವೇಳೆ ಮಡಿದ ಆರಕ್ಷಕರ ಸ್ಮಾರಕಕ್ಕೆ ಸುನೀಲ್ ಕುಮಾರ್ ಪುಷ್ಟಾರ್ಚನೆ ಮಾಡಿದರು. ಸಕಲ ಪೊಲೀಸ್ ವಾದ್ಯಗಳ ಮೂಲಕ ಹುತಾತ್ಮ ಪೊಲೀಸರಿಗೆ ನಮನ ಸಲ್ಲಿಸಿದರು.