ವಿಜಯಪುರ: ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳಾಡುತ್ತಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ಸೇರಿಸಿ ಪೊಲೀಸರು ಮಾನವೀಯತೆ ಮೆರೆದ ಘಟನೆ ಇಂಡಿ ತಾಲೂಕಿನ ನಾದಕೆ ಡಿ ಗ್ರಾಮದಲ್ಲಿ ನಡೆದಿದೆ.
ಬೈಕ್ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪೊಲೀಸರು - Alamel Road
ನಿಯಂತ್ರಣ ತಪ್ಪಿ ಬೈಕ್ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
![ಬೈಕ್ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪೊಲೀಸರು dsd](https://etvbharatimages.akamaized.net/etvbharat/prod-images/768-512-9141582-thumbnail-3x2-vis.jpg)
ಗ್ಯಾರೇಜ್ ಕುಸಿದು ಬಿದ್ದು ವ್ಯಕ್ತಿ ಸಾವು
ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿದ ಪೊಲೀಸರು
ಅಶೋಕ ಬೋಳೆಗಾಂವ (40) ಗಾಯಗೊಂಡ ಸವಾರ. ಅಲಮೇಲ್ ರಸ್ತೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡು ನರಳಾಡುತ್ತಿದ್ದ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಪೊಲೀಸರು ರಸ್ತೆ ಪಕ್ಕ ಗಾಯಗೊಂಡು ಬಿದ್ದಿದ್ದ ವ್ಯಕ್ತಿಗೆ ನೀರು ಕುಡಿಸಿ ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಇನ್ನು ರಸ್ತೆಯಲ್ಲಿ ಗುಂಡಿ ಹೆಚ್ಚಾಗಿರುವ ಕಾರಣ ರಾತ್ರಿ ವೇಳೆ ತಗ್ಗು ಕಾಣದೆ ಬೈಕ್ ಸವಾರ ಬಿದ್ದು ಗಾಯಗೊಂಡಿದ್ದಾನೆ ಎನ್ನಲಾಗುತ್ತಿದೆ. ಸಮಯಕ್ಕೆ ಸರಿಯಾಗಿ ಪೊಲೀಸರು ನೆರವಿಗೆ ಬಂದಿದ್ದರಿಂದ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.