ವಿಜಯಪುರ:ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ ಮಾರಾಟಕ್ಕೆ ತಂದಿಟ್ಟ ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ವಿಜಯಪುರ: ಹೋಟೆಲ್ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ
ವಿಜಯಪುರದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಹೋಟೆಲ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿ ಮದ್ಯದ ಬಾಕ್ಸ್ ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಬಂಧನ
ಬಂಧಿತ ಆರೋಪಿ ಮಲ್ಲಪ್ಪ ಬೂದಿಹಾಳ, ದುಬಾರಿ ಬೆಲೆಗೆ ಮದ್ಯ ಮಾರಾಟದಲ್ಲಿ ತೊಡಗಿದ್ದ ಎನ್ನಲಾಗುತ್ತಿದ್ದು, ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಹೋಟೆಲ್ನಲ್ಲಿ ಹುಡುಕಾಟ ನಡೆಸಿದ ಪೊಲೀಸರು ಅಕ್ರಮವಾಗಿ ಬಚ್ಚಿಟ್ಟ ಮದ್ಯದ ಬಾಕ್ಸ್ ವಶಕ್ಕೆ ಪಡೆದಿದ್ದಾರೆ.