ವಿಜಯಪುರ: ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಸಿಂದಗಿ ಶಾಸಕ ಎಂ.ಸಿ.ಮನಗೂಳಿ ಅನಾರೋಗ್ಯದಿಂದ ನಿಧನರಾಗಿದ್ದು, ಇಂದು ಸಿಂದಗಿ ಪಟ್ಟಣದ ಹೆಚ್.ಜಿ. ಕಾಲೇಜ್ ಮೈದಾನದಲ್ಲಿ ಸಾರ್ವಜನಿಕರಿಗೆ ಹಾಗೂ ರಾಜಕೀಯ ಮುಖಂಡರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು.
ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾದ ಮಾಜಿ ಸಚಿವ ಎಂ.ಸಿ.ಮನಗೂಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ಈಶ್ವರ್ ಖಂಡ್ರೆ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ಶಾಸಕರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ್, ಯಶವಂತರಾಯಗೌಡ ಪಾಟೀಲ, ಎ.ಎಸ್.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಎಂ.ಪಿ.ನಾಡಗೌಡ ಸೇರಿದಂತೆ ಜಿಲ್ಲೆ ಹಾಗೂ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕದ ಬಹುತೇಕ ಜನಪ್ರತಿನಿಧಿಗಳು, ಮುಖಂಡರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.