ಕರ್ನಾಟಕ

karnataka

ವಿಜಯಪುರ ಸೈನಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೊರೊನಾ: ಮತ್ತೆ ಆತಂಕ

By

Published : Mar 18, 2021, 9:10 PM IST

140 ವಿದ್ಯಾರ್ಥಿಗಳ ಸ್ವ್ಯಾಬ್ ಟೆಸ್ಟ್ ಮಾಡಿಸಲಾಗಿತ್ತು. ಅದರಲ್ಲಿ 8 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಮಾ. 17ರಂದು ಒಂದೇ ದಿನ 5 ವಿದ್ಯಾರ್ಥಿಗಳಿಗೆ ಹಾಗೂ ಇಂದು ಮೂವರು ವಿದ್ಯಾರ್ಥಿಗಳ ಸ್ವ್ಯಾಬ್ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​ ಕುಮಾರ್​ ತಿಳಿಸಿದ್ದಾರೆ.

ಸೈನಿಕ ಶಾಲೆ
ಸೈನಿಕ ಶಾಲೆ

ವಿಜಯಪುರ: ಕೊರೊನಾ ಎರಡನೇ ಅಲೆ ಜಿಲ್ಲೆಗೆ ಅಪ್ಪಳಿಸಿದೆ. ನಗರದ ಸೈನಿಕ ಶಾಲೆಯ 8 ವಿದ್ಯಾರ್ಥಿಗಳಲ್ಲಿ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​ ಕುಮಾರ್​ ತಿಳಿಸಿದ್ದಾರೆ.

ಒಟ್ಟು 140 ವಿದ್ಯಾರ್ಥಿಗಳ ಸ್ವ್ಯಾಬ್ ಟೆಸ್ಟ್ ಮಾಡಿಸಲಾಗಿತ್ತು. ಅದರಲ್ಲಿ 8 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಮಾ. 17ರಂದು ಒಂದೇ ದಿನ 5 ವಿದ್ಯಾರ್ಥಿಗಳಿಗೆ ಹಾಗೂ ಇಂದು ಮೂವರು ವಿದ್ಯಾರ್ಥಿಗಳ ಸ್ವ್ಯಾಬ್ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಇವರಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಉಳಿದ 6 ಪಾಸಿಟಿವ್ ವಿದ್ಯಾರ್ಥಿಗಳನ್ನು ಸೈನಿಕ ಶಾಲೆಯಲ್ಲಿಯೇ ಐಸೋಲೇಶನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಳೆದ ಮಾ. 7ರಿಂದ 17ರವರೆಗೆ ಒಟ್ಟು 15,784 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 134 ಜನರ ವರದಿ ಪಾಸಿಟಿವ್ ಬಂದಿದೆ. ಶೇ. 0.84ರಷ್ಟು ಪಾಸಿಟಿವ್ ಸೋಂಕು ಹೊಂದಿದವರಾಗಿದ್ದಾರೆ ಎಂದು ತಿಳಿಸಿದರು.

ಕಳೆದ ವರ್ಷ ಸೇರಿಸಿ ಇಲ್ಲಿಯವರೆಗೆ 3,45,213 ಜನರ ಸ್ವ್ಯಾಬ್ ಟೆಸ್ಟ್ ತೆಗೆದುಕೊಳ್ಳಲಾಗಿದೆ. ಅದರಲ್ಲಿ 14,719 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಇಲ್ಲಿಯವರೆಗೆ 14,403 ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಕೊರೊನಾದಿಂದ 206 ಜನ ಸಾವನ್ನಪ್ಪಿದ್ದಾರೆ. ಇಂದು ಮತ್ತೆ 46 ಜನರ ವರದಿ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಸುನೀಲ್​ ಕುಮಾರ್ ತಿಳಿಸಿದ್ದಾರೆ.

ABOUT THE AUTHOR

...view details