ಕರ್ನಾಟಕ

karnataka

ETV Bharat / state

ವಿಜಯಪುರದಲ್ಲಿ ಮತ್ತಿಬ್ಬರಿಗೆ ಕೊರೊನಾ ದೃಢ: 50ರ ಗಡಿ ಮುಟ್ಟಿದ ಸೋಂಕಿತರ ಸಂಖ್ಯೆ - ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ಇಂದು ಒಬ್ಬರಿಗೆ ಕೋವಿಡ್ ಸೋಂಕು ತಗಲಿದ್ದು, ರೋಗಿ ಸಂಖ್ಯೆ - 856 (20 ವರ್ಷದ ಮಹಿಳೆ) ಇವರಿಗೆ ರೋಗಿ ಸಂಖ್ಯೆ - 511ರ ಸಂಪರ್ಕದಿಂದ ಸೋಂಕು ತಗುಲಿದ್ದು, ಕಂಟೇನ್ಮೆಂಟ್ ವಲಯ ವ್ಯಾಪ್ತಿಯಿಂದ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ.

Positive number crossing the Vijayapura Health Bulletin, 50
ವಿಜಯಪುರ ಹೆಲ್ತ್ ಬುಲೆಟಿನ್, 50ರ ಗಡಿ ದಾಟಿದ ಪಾಸಿಟಿವ್ ಸಂಖ್ಯೆ

By

Published : May 11, 2020, 11:55 PM IST

ವಿಜಯಪುರ:ಜಿಲ್ಲೆಯಲ್ಲಿ ಈವರೆಗೆ 50 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಒಟ್ಟು 33 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

ಇಂದು ಒಬ್ಬರಿಗೆ ಕೋವಿಡ್ ಸೋಂಕು ತಗಲಿದ್ದು, ರೋಗಿ ಸಂಖ್ಯೆ - 856 (20 ವರ್ಷದ ಮಹಿಳೆ) ಇವರಿಗೆ ರೋಗಿ ಸಂಖ್ಯೆ - 511ರ ಸಂಪರ್ಕದಿಂದ ಸೋಂಕು ತಗುಲಿದ್ದು, ಕಂಟೇನ್ಮೆಂಟ್ ವಲಯ ವ್ಯಾಪ್ತಿಯಿಂದ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ. ನಗರದ ನಿಗದಿತ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 2153 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 637 ಜನರು 28 ದಿನಗಳ ಐಸೋಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. ಈವರೆಗೆ ಒಟ್ಟು ಮೂರು ಜನ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. 33 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 14 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ.

ಈವರೆಗೆ 2539 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 2405 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 84 ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಹೇಳಿದರು. ವಿವಿಧ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಲು ಇಂದು ಆನ್‍ಲೈನ್ ಮೂಲಕ 4140 ಜನರು ಅರ್ಜಿ ಸಲ್ಲಿಸಿದ್ದಾರೆ. ನೋಂದಣಿ ಮಾಡಿಸಿಕೊಂಡ 3268 ಜನ ಕಾರ್ಮಿಕರು, ಪ್ರವಾಸಿಗರು, ವಿದ್ಯಾರ್ಥಿಗಳಿಗೆ ಅನುಮತಿ ನೀಡಲಾಗಿದೆ.

ಇನ್ನೂ 872 ಜನರ ಅನುಮತಿಯನ್ನು ಕಾಯ್ದಿರಿಸಲಾಗಿದೆ. ವಿಜಯಪುರ ಜಿಲ್ಲೆಯಿಂದ ವಿವಿಧ ರಾಜ್ಯಗಳಿಗೆ ತೆರಳಲು ಒಟ್ಟು 5737 ಕಾರ್ಮಿಕರು, ಪ್ರವಾಸಿಗರು, ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details