ವಿಜಯಪುರ:ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಮಳೆ, ಪ್ರವಾಹ ಹಿನ್ನೆಲೆ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪರೀಕ್ಷೆಗಳು ನವೆಂಬರ್ 6ಕ್ಕೆ ಮುಂದೂಡಿಕೆಯಾಗಿವೆ.
ಮಳೆ ಅವಾಂತರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ - vijayapur news
ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಿನ್ನೆಲೆ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ನವೆಂಬರ್ 6ಕ್ಕೆ ಮುಂದೂಡಲಾಗಿದೆ.
ನೆರೆ ಹಿನ್ನೆಲೆ...ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪರೀಕ್ಷೆಗಳು ನ.6ಕ್ಕೆ ಮುಂದೂಡಿಕೆ
ಇದೇ ಅಕ್ಟೋಬರ್ 25ರಿಂದ ನಡೆಯಬೇಕಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಗಳು ನವೆಂಬರ್ 6ಕ್ಕೆ ಮುಂದೂಡಿಕೆಯಾಗಿವೆ ಎಂದು ವಿವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಯ ವ್ಯಾಪ್ತಿಯ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.