ಕರ್ನಾಟಕ

karnataka

ETV Bharat / state

ಮುದ್ದೇಬಿಹಾಳ ತಾಪಂ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿಕೆ

ಕೋರಂ ಕೊರತೆ ಇದ್ದ ಕಾರಣ ತಾಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ ಎಂದು ಚುನಾವಣಾಧಿಕಾರಿ ಸೋಮಲಿಂಗ ಗೆಣ್ಣೂರ ತಿಳಿಸಿದ್ದಾರೆ.

ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿಕೆ
ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿಕೆ

By

Published : Jul 23, 2020, 5:22 PM IST

Updated : Jul 23, 2020, 6:02 PM IST

ಮುದ್ದೇಬಿಹಾಳ (ವಿಜಯಪುರ):ಕೋರಂ ಕೊರತೆ ಹಿನ್ನೆಲೆಯಲ್ಲಿ ಗುರುವಾರ ನಿಗದಿಯಾಗಿದ್ದ ತಾಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಿರುವುದಾಗಿ ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಸೋಮಲಿಂಗ ಗೆಣ್ಣೂರ ಹೇಳಿದ್ದಾರೆ.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯ ಹೊರಗಡೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣಾ ಮುಂದೂಡಿಕೆ ಮಾಹಿತಿ ನೀಡಿದರು. ಇಂದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಬಯಸಿ ಕಾಂಗ್ರೆಸ್​ನಿಂದ ಲತಾ ಮುತ್ತಿನಶೆಟ್ಟಿ ಗೂಳಿ ಹಾಗೂ ಬಿಜೆಪಿಯಿಂದ ಸದಸ್ಯೆ ಲಕ್ಷ್ಮೀ ಬಾಯಿ ಪವಾಡೆಪ್ಪ ಹವಾಲ್ದಾರ ಅವರು ನಾಮಪತ್ರ ಸಲ್ಲಿಸಿದ್ದರು. ನಿಯಮದ ಪ್ರಕಾರ ಏಳು ಜನ ಸಭೆಗೆ ಹಾಜರಿರಬೇಕಿತ್ತು. ಆದರೆ ಆರು ಜನ ಮಾತ್ರ ಸಭೆಗೆ ಹಾಜರಾಗಿದ್ದರಿಂದ ಕೋರಂ ಕೊರತೆಯಾಗಿದೆ. ಹೀಗಾಗಿ ಸಭೆಯನ್ನು ಮುಂದೂಡಿರುವುದಾಗಿ ಉಪ ವಿಭಾಗಾಧಿಕಾರಿ ತಿಳಿಸಿದ್ದಾರೆ.

ತಾಪಂ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಿಕೆ

ಮುದ್ದೇಬಿಹಾಳ ತಹಶೀಲ್ದಾರ್ ಅವರು, ಲತಾ ಗೂಳಿ ಅವರಿಗೆ ನೀಡಿದ ಜಾತಿ ಪ್ರಮಾಣ ಪತ್ರವನ್ನು ಹಿಂಪಡೆಯಲಾಗಿದೆ ಎಂದು ಚುನಾವಣಾಧಿಕಾರಿಗಳಿಗೆ ಪತ್ರ ಸಲ್ಲಿಸಿದ್ದಾರೆ. ಸದಸ್ಯ ಶಿವನಗೌಡ ನಿಂಗನಗೌಡ ಮುದ್ದೇಬಿಹಾಳ ಇವರು 11.02 ನಿಮಿಷಕ್ಕೆ ಜಾತಿ ಪ್ರಮಾಣ ಪತ್ರ ರದ್ದು ಕುರಿತಾದ ಪತ್ರ ನೀಡಿದ್ದಾರೆ. ಆದರೆ ಕೋರಂ ಕೊರತೆ ಹಿನ್ನೆಲೆಯಲ್ಲಿ ನಾಮಪತ್ರಗಳ ಪರಿಶೀಲನೆ ನಡೆಸಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಚುನಾವಣಾಧಿಕಾರಿಗಳು ಉತ್ತರಿಸಿದರು.

ತಾಪಂ ಚುನಾವಣೆಯ ಸಂದರ್ಭದಲ್ಲಿ ಗಲಾಟೆಗಳಾಗಬಹುದೆಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.

Last Updated : Jul 23, 2020, 6:02 PM IST

ABOUT THE AUTHOR

...view details