ಮುದ್ದೇಬಿಹಾಳ(ವಿಜಯಪುರ):ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ತಾಲೂಕಿನ ಕುಂಟೋಜಿಯಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದಾಗ ಬೆಳಗಿನಜಾವ ವಿಷಕಾರಿ ಹಾವು ಕಚ್ಚಿದೆ ಎನ್ನಲಾಗಿದೆ.
ತೀವ್ರ ಅಸ್ವಸ್ಥಳಾದ ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟಿದ್ದಾರೆ. ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.