ವಿಜಯಪುರ: ತಾಳಿಕೋಟೆ ಪ್ರವೇಶಿಸುವ ಡೋಣಿ ನದಿಯ ಮೇಲಿನ ದಶಕಗಳಷ್ಟು ಹಳೆಯದಾದ ಸೇತುವೆ 15 ಮೀಟರ್ ನಷ್ಟು ಭಾಗ ಕುಸಿಯಲು ತೊಡಗಿದೆ. ಈ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಸೇತುವೆ ಮೇಲೆ ಸಂಚಾರವನ್ನು ಈಗಾಗಲೇ ಬಂದ್ ಮಾಡಲಾಗಿದೆ. ದೆಹಲಿಯಿಂದ ಇಬ್ಬರು ಇಂಜಿನಿಯರ್ಗಳು ಇಂದು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಜೊತೆಗೆ ಬೆಂಗಳೂರಿನಿಂದ ಹಿರಿಯ ಅಧಿಕಾರಿಗಳು ಆಗಮಿಸುವ ನಿರೀಕ್ಷೆಯಲ್ಲಿ ಇಲ್ಲಿನ ಅಧಿಕಾರಿಗಳಿದ್ದಾರೆ.
ಇಂಜಿನಿಯರ್ಗಳು ಆಗಮಿಸಿ ಪರಿಶೀಲನೆ ಬಳಿಕ ಸೇತುವೆ ಯಾವ ಸ್ಥಿತಿಯಲ್ಲಿದೆ ಅನ್ನೋದರ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿರಿಯ ಅಧಿಕಾರಿಗಳ ಪರಿಶೀಲನೆ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.
ಸದ್ಯ ಸೇತುವೆ ಪಕ್ಕದಲ್ಲಿರುವ ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ಹಳೆಯ ಸೇತುವೆ ಮೇಲೆ ಸಂಚಾರಕ್ಕೆ ಅನುವು ಆಗುವಂತೆ ರಸ್ತೆ ದುರಸ್ತಿಯನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.