ವಿಜಯಪುರ: ಜಿಲ್ಲಾಧಿಕಾರಿ ವರ್ಗಾವಣೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಡಿಸಿ ವರ್ಗಾವಣೆ ಆದೇಶ ಹಿಂಪಡೆಯುವಂತೆ ಆಗ್ರಹ: ಪ್ರಗತಿಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ - ವಿಜಯಪುರದಲ್ಲಿ ಪ್ರತಿಭಟನೆ
ಜಿಲ್ಲಾಧಿಕಾರಿ ವರ್ಗಾವಣೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ವರ್ಗಾವಣೆ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ. ಅಲ್ಲದೆ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಗಲಿರಳು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಳ್ಳಿಗಳಿಗೆ ಭೇಟಿ ನೀಡಿ ಶ್ರಮಿಸಿದ್ದಾರೆ. ಜನರ ಕಷ್ಟಕ್ಕೆ ಸ್ಪಂದಿಸುವ ಅಧಿಕಾರಿಯನ್ನು ಈ ಸಂದರ್ಭದಲ್ಲಿ ವರ್ಗಾವಣೆ ಮಾಡುವುದು ಸರಿಯಲ್ಲ. ಒಬ್ಬ ದಕ್ಷ, ಸರಳ ಜಿಲ್ಲಾಧಿಕಾರಿಯನ್ನು ಎತ್ತಂಗಡಿ ಮಾಡಿರುವುದು ಪ್ರಭಾವಿಗಳ ಕುತಂತ್ರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸರ್ಕಾರ ಡಿಸಿ ವರ್ಗಾವಣೆ ಆದೇಶ ಹಿಂಪಡೆಯುವಂತೆ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.