ಕರ್ನಾಟಕ

karnataka

ETV Bharat / state

ಕೋವಿಡ್ ಆಸ್ಪತ್ರೆಗಳ ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿಗೆ ಮನವಿ - ಕೋವಿಡ್ ಆಸ್ಪತ್ರೆಗಳ ಸಮಸ್ಯೆ ಪರಿಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದ ನಿಗದಿತ ನಿಯಮಗಳ ಉಲ್ಲಂಘನೆಯಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗುವಂತೆ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ರು.

Appeals to DC
ಪ್ರಗತಿಪರ ಸಂಘಟನೆ ಕಾರ್ಯಕರ್ತರಿಂದ ಡಿಸಿಗೆ ಮನವಿ

By

Published : Sep 15, 2020, 1:30 PM IST

ವಿಜಯಪುರ:ಸರ್ಕಾರಿ ಹಾಗೂ ಖಾಸಗಿ ಕೋವಿಡ್ ಆಸ್ಪತ್ರೆ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರಗತಿಪರ ಸಂಘಟನೆ ಕಾರ್ಯಕರ್ತರಿಂದ ಡಿಸಿಗೆ ಮನವಿ

ಕೊರೊನಾ‌ ವೈಸರ್ ಭೀತಿಯಿಂದ ಜನರು ಜೀವನ ನಡೆಸಲು ಕಷ್ಟವಾಗಿದೆ. ಕೋವಿಡ್​ ಆಸ್ಪತ್ರೆಗಳಲ್ಲಿ ಸಮಸ್ಯೆಗಳು ಹೆಚ್ಚುತ್ತಿವೆ. ಅಲ್ಲದೆ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಹೆಸರಿನಲ್ಲಿ ಬಡ ಜನರಿಗೆ ಹೆಚ್ಚಿನ ಪ್ರಮಾಣದಲ್ಲಿ ಬಿಲ್​ ಮಾಡುತ್ತಿದ್ದಾರೆ. ರೋಗಿ ಗುಣಮುಖರಾದ್ರೂ ಹೆಚ್ಚು ದಿನಗಳ ಕಾಲ ಆಸ್ಪತ್ರೆಗೆ ದಾಖಲಿಸಿಕೊಳ್ಳುವ ಪ್ರವೃತ್ತಿ ಬೆಳಕಿಗೆ ಬರುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದ ನಿಗದಿತ ನಿಯಮಗಳ ಉಲ್ಲಂಘನೆಯಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗುವಂತೆ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ರು.

ಇನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅಲ್ಲದೆ ಗಂಟಲು ದ್ರವ ಮಾದರಿ ಪರೀಕ್ಷೆಗೆ ಪಡೆದರೂ ತಡವಾಗಿ ವರದಿ ಬರುತ್ತಿದೆ. ಹಾಗಾಗಿ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮುಂದಾಗುವಂತೆ ಜಿಲ್ಲಾಧಿಕಾರಿಗೆ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಮನವಿ ಮಾಡಿದರು.

ABOUT THE AUTHOR

...view details