ವಿಜಯಪುರ: ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು
ವಿಜಯಪುರ: ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ - ದಲಿತರ ಮೇಲೆ ಹಲ್ಲೆ ವಿರುದ್ಧ ವಿಜಯಪುರದಲ್ಲಿ ಪ್ರತಿಭಟನೆ
ರಾಜ್ಯದಲ್ಲಿ ನಿರಂತರವಾಗಿ ಸವರ್ಣೀಯರಿಂದ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಮೌನ ವಹಿಸಿರುವುದನ್ನು ಖಂಡಿಸಿ ವಿಜಯಪುರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಮೌನ ವಹಿಸಿದೆ. ವಿಜಯಪುರ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸವರ್ಣೀಯರು ದಲಿತ ಮೇಲೆ ಹಲ್ಲೆ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದರೂ, ಕಂಡು ಕಾಣದಂತೆ ಜಾಣಕುರುಡುತನ ಪ್ರದರ್ಶಿಸುತ್ತಿದೆ. ಅಲ್ಲದೆ ದಲಿತರ ಮೇಲೆ ಸುಳ್ಳು ಆರೋಪಗಳ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ದಲಿತರ ಮೇಲೆ ನಡೆಯುತ್ತಿರುವ ಹಲ್ಲೆ, ಶೋಷಣೆ, ಕೊಲೆಗಳನ್ನು ತಡೆಯಲು ಕ್ರಮಕ್ಕೆ ಮುಂದಾಗಬೇಕು. ಹಲ್ಲೆ ಮಾಡುವವರಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು. ದೌರ್ಜನ್ಯಕ್ಕೆ ತುತ್ತಾದ ದಲಿತ ಕುಟುಂಬಕ್ಕೆ ಪುನರ್ವಸತಿ ನಿರ್ಮಾಣ ಮಾಡಬೇಕು. ದಲಿತರಿಗೆ ಹಾಕುವ ಬಹಿಷ್ಕಾರ ತಡೆಗೆ ಕಟ್ಟುನಿಟ್ಟಿನ ಕ್ರಮ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನಾಕಾರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
TAGGED:
Atrocities on Dalits