ವಿಜಯಪುರ: ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದ ಬಿಜೆಪಿಯ ನಾಲ್ವರು ಜಿ.ಪಂ. ಸದಸ್ಯರ ವಿರುದ್ಧ ಸಿಂದಗಿಯ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ತಾಲೂಕು ಬಿಜೆಪಿ ಕಾರ್ಯಕರ್ತರು ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ವಿಜಯಪುರ ಜಿ.ಪಂ. ಚುನಾವಣೆಯಲ್ಲಿ ಕೈ ಅಭ್ಯರ್ಥಿಗೆ ಬಿಜೆಪಿ ಸದಸ್ಯರ ಬೆಂಬಲ: ಕಾರ್ಯಕರ್ತರ ಪ್ರತಿಭಟನೆ
ವಿಜಯಪುರ ಜಿ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಕೊಟ್ಟಿದ್ದ ಬಿಜೆಪಿಯ ನಾಲ್ವರು ಸದಸ್ಯರ ವಿರುದ್ಧ ತಾಲೂಕು ಬಿಜೆಪಿ ಮಂಡಲದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಲೂಕು ಬಿಜೆಪಿ ಮಂಡಲದ ಕಾರ್ಯಕರ್ತರ ಪ್ರತಿಭಟನೆ
ಹಣ, ಅಧಿಕಾರದ ಆಮಿಷಕ್ಕಾಗಿ ಬಿಜೆಪಿಯ ನಾಲ್ವರು ಸದಸ್ಯರು ಕಾಂಗ್ರೆಸ್ಗೆ ಬೆಂಬಲ ಸೂಚಿಸಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅವರನ್ನು ಶಾಶ್ವತವಾಗಿ ಪಕ್ಷದಿಂದ ಹೊರಹಾಕಬೇಕು. ಕಾನೂನು ಕ್ರಮಕ್ಕೂ ಮುಂದಾಗಬೇಕು ಎಂದು ಒತ್ತಾಯಿಸಿದರು.