ವಿಜಯಪುರ:ಪೆಟ್ರೋಲ್,ಡಿಸೇಲ್ ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಎಸ್‌ಯುಸಿಇ ಕಾರ್ಯಕರ್ತರು, ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ದಿನದಿಂದ ದಿನಕ್ಕೆ ಡಿಸೇಲ್,ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದ್ದು ಜನ ಸಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.
ಪ್ರತಿಭಟನೆ ನಡೆಸಿದ ಎಸ್‌ಯುಸಿಐ ಸಂಘಟನೆ ಕಾರ್ಯಕರ್ತರು ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಕಡಿಮೆವಿದ್ದರೂ ಕೇಂದ್ರ ಸರ್ಕಾರ ಮಾತ್ರ ತೈಲ ಬೆಲೆ ಹೆಚ್ಚಿಸುತ್ತಿರುವುದಕ್ಕೆ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅಲ್ಲದೆ ಕೊರೊನಾ ಆತಂಕದಿಂದ ಜನರು 7೦ ದಿನಗಳ ಲಾಕ್ಡೌನ್ದಿಂದ ತತ್ತರಿಸಿದ್ದಾರೆ. ಜೀವನ ನಡೆಸಲು ಆಗುತ್ತಿಲ್ಲ. ಈ ಸಂದರ್ಭದಲ್ಲೂ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ ಮಾಡಲು ಮುಂದಾಗುವಂತೆ ಆಗ್ರಹಿಸಿದರು.
ಕೇಂದ್ರ ಸರ್ಕಾರ ಜನ ವಿರೋಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಜನ ಸಾಮಾನ್ಯರಿಗೆ ತೊಂದರೆಯುಂಟು ಮಾಡುತ್ತಿದೆ. ತೈಲ ಬೆಲೆ ಕಡಿಮೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು..