ವಿಜಯಪುರ:ಮಾರಣಾಂತಿಕ ಹಲ್ಲೆಗೊಳಗಾದ ಯುವತಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿಜಯಪುರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅ.17ರಂದು ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ದಲಿತ ಯುವತಿ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದರು.
ದಲಿತ ಯುವತಿ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ಪ್ರತಿಭಟನೆ - ವಿಜಯಪುರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟ
ದಲಿತ ಯುವತಿ ಮೇಲೆ ಹಲ್ಲೆ ಪ್ರಕರಣ ಸಂಬಂಧ ಯುವತಿಗೆ ನ್ಯಾಯ ದೊರಕಿಸುವಂತೆ ವಿಜಯಪುರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಳೆದ 13 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಯುವತಿ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ಪ್ರತಿಭಟನೆ
ಬಳಿಕ ಗೋಲ್ಗುಂಬಜ್ ಠಾಣೆಯಲ್ಲಿ ಯುವತಿ ಸಂಬಂಧಿಕರು ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆದರೆ ಹಲ್ಲೆ ನಡೆಸಿದ ಆರೋಪಿಗಳು ನಾಳೆ ಜಾಮೀನು ಪಡೆದು ಹೊರ ಬರುವಂತ್ತಿದ್ದಾರೆ. ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಗಳಿಗೆ ಜಿಲ್ಲಾಡಳಿತ ತಕ್ಕ ಪಾಠ ಕಲಿಸಲು ಮುಂದಾಗುತ್ತಿಲ್ಲ.
ಕಳೆದ 13 ದಿನಗಳಿಂದ ಆಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಯುವತಿಗೆ ನ್ಯಾಯ ದೊರೆತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.