ವಿಜಯಪುರ :ಆಶಾ ಕಾರ್ಯಕರ್ತೆಯರಿಗೆ ₹12 ಸಾವಿರ ವೇತನ ನಿಗದಿಪಡಿಸುವಂತೆ ಒತ್ತಾಯಿಸಿ ಜುಲೈ 29ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಹೆಚ್ ಟಿ ಮಲ್ಲಿಕಾರ್ಜುನ ತಿಳಿಸಿದರು.
ಜುಲೈ 29ರಂದು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಿರುವ ಆಶಾ ಕಾರ್ಯಕರ್ತೆಯರು - Vijayapura District News
ಆರೋಗ್ಯ ಸಚಿವರು ವೇತನ ಹೆಚ್ಚಳ ಕುರಿತು ನಾಳೆ ಸಿಹಿ ಸುದ್ದಿ ನೀಡುತ್ತೇವೆ ಎಂದು ಕಾಲಹರಣ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ, ರಾಜ್ಯಾದ್ಯಂತ ಇದೇ ತಿಂಗಳು 29ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು..
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15 ದಿನಗಳಿಂದ ಆಶಾ ಕಾರ್ಯಕರ್ತೆಯರು ಹೋರಾಡುತ್ತಿದ್ದಾರೆ. ಸರ್ಕಾರದಿಂದ ₹12 ಸಾವಿರ ವೇತನ ನಿಗದಿ ಕುರಿತು ಮಾತನಾಡುತ್ತಿಲ್ಲ. ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ಅವರಿಗೆ ಆರೋಗ್ಯ ರಕ್ಷಣಾ ಕಿಟ್ ಕೂಡ ನೀಡದಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು.
ಆಶಾ ಕಾರ್ಯಕರ್ತೆಯರು ಕೆಲಸ ಸ್ಥಗಿತಗೊಳಿಸಿದ್ದಾರೆ. ಆರೋಗ್ಯ ಸಚಿವರು ವೇತನ ಹೆಚ್ಚಳ ಕುರಿತು ನಾಳೆ ಸಿಹಿ ಸುದ್ದಿ ನೀಡುತ್ತೇವೆ ಎಂದು ಕಾಲಹರಣ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ, ರಾಜ್ಯಾದ್ಯಂತ ಇದೇ ತಿಂಗಳು 29ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.