ಕರ್ನಾಟಕ

karnataka

ETV Bharat / state

ಎಸಿಬಿ ರದ್ದುಪಡಿಸಿ ಲೋಕಾಯುಕ್ತ ಬಲಗೊಳಿಸಲು ಆಗ್ರಹಿಸಿ ಪ್ರತಿಭಟನೆ - ವಿಜಯಪುರ ಜಿಲ್ಲಾ ಸುದ್ದಿ

ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಬಲಗೊಳಿಸುವಂತೆ ಆಗ್ರಹಿಸಿ ವಿಜಯಪುರದ ಜಿಲ್ಲಾಧಿಕಾರಿ ಕಚೇರಿ ಎದುರು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಪ್ರತಿಭಟನೆ ನಡೆಸಿತು.

protest against state government
ಪ್ರತಿಭಟನೆ

By

Published : Jun 29, 2020, 4:32 PM IST

ವಿಜಯಪುರ: ರಾಜ್ಯದಲ್ಲಿ ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಬಲಗೊಳಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.

ಚುನಾವಣೆ ಪೂರ್ವದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಬಲಪಡಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಬಿಎಸ್‌ವೈ ಅಧಿಕಾರಕ್ಕೆ ಬರುತ್ತಿದ್ದಂತೆ ಕೊಟ್ಟ ಮಾತನ್ನು ಮರೆತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನಡೆಸಿದ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ

ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಇದರಿಂದ ರಾಜ್ಯದ ಬೊಕ್ಕಸ ಖಾಲಿಯಾಗುತ್ತಿದೆ. ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟ ಅಧಿಕಾರಿಗಳಿಂದ ಅಭಿವೃದ್ಧಿ ಮರೀಚಿಕೆಯಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು.

ಎಸಿಬಿ ರಚನೆಯಾದರೂ ಭ್ರಷ್ಟಾಚಾರ ನಿಂತಿಲ್ಲ. ಜೊತೆಗೆ ಸರ್ಕಾರಕ್ಕೆ ನಷ್ಟವೇ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಬಲಿಪಶುಗಳಾಗುತ್ತಿದ್ದಾರೆ. ಎಸಿಬಿ ರದ್ದುಗೂಳಿಸಿ ಲೋಕಾಯುಕ್ತ ಬಲಪಡಿಸುವಂತೆ ಒತ್ತಾಯಿಸಿ ಪ್ರತಿಭಟಕಾರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details