ಕರ್ನಾಟಕ

karnataka

ETV Bharat / state

ದಲಿತ ಯುವತಿ ಹತ್ಯೆ ಖಂಡಿಸಿ ಪ್ರತಿಭಟನೆ: ಯೋಗಿ ಆದಿತ್ಯನಾಥ್​ ಭಾವಚಿತ್ರ ದಹಿಸಿ ಆಕ್ರೋಶ - ಮುದ್ದೇಬಿಹಾಳದಲ್ಲಿ ಪ್ರತಿಭಟನೆ ಲೇಟೆಸ್ಟ್​ ಸುದ್ದಿ

ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಉತ್ತರ ಪ್ರದೇಶ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪ್ರತಿಭಟನೆ ನಡಸಲಾಯ್ತು.

protest against uttarapradesh rape case
ಪ್ರತಿಭಟನೆ

By

Published : Sep 30, 2020, 9:59 PM IST

ಮುದ್ದೇಬಿಹಾಳ: ಉತ್ತರ ಪ್ರದೇಶದಲ್ಲಿ ದಲಿತ ಯುವತಿಯನ್ನು ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಿ ಸುಟ್ಟು ಹಾಕಿದ ಘಟನೆ ಖಂಡಿಸಿ ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಎನ್.ಎಸ್.ಯು.ಐ ಹಾಗೂ ಯುವ ಕಾಂಗ್ರೆಸ್ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ
ಈ ಸಂದರ್ಭದಲ್ಲಿ ಮಾತನಾಡಿದ ಎನ್.ಎಸ್.ಯು.ಐ ಸಂಘಟನೆ ಜಿಲ್ಲಾಧ್ಯಕ್ಷ ಸದ್ಧಾಂ ಕುಂಟೋಜಿ, ಉತ್ತರ ಪ್ರದೇಶ ಸರಕಾರದಲ್ಲಿ ಮಹಿಳೆಯರು ಸುರಕ್ಷಿತವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸಿಎಂ ಆದಿತ್ಯನಾಥ್ ಅವರ ಸರಕಾರದ ನಿರ್ಲಕ್ಷ್ಯದಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಹರಿಹಾಯ್ದರು. ಇದೇ ವೇಳೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭಾವಚಿತ್ರಕ್ಕೆ ಮಸಿ ಬಳಿದು ಬೆಂಕಿ ಹಚ್ಚಿ ದಹಿಸಲಾಯಿತು.

ಯುವ ಕಾಂಗ್ರೆಸ್ ಅಧ್ಯಕ್ಷ ಮಹ್ಮದ್​ ರಫೀಕ್​ ಶಿರೋಳ, ಉಪಾಧ್ಯಕ್ಷ ಮಹ್ಮದ್​ ಯೂಸುಫ್​ ನಾಯ್ಕೋಡಿ,ಎಸ್‌ಸಿ ಮೋರ್ಚಾ ಅಧ್ಯಕ್ಷ ಅಶೋಕ ಅಜಮನಿ,ಹುಸೇನ್​ ಮುಲ್ಲಾ,ಮಾನಪ್ಪ ನಾಯಕ,ಲಕ್ಷಣ ಚವ್ಹಾಣ,ಮಹಿಬೂಬ ಮೊಕಾಶಿ ಮೊದಲಾದವರು ಇದ್ದರು.

ABOUT THE AUTHOR

...view details