ಕರ್ನಾಟಕ

karnataka

ETV Bharat / state

ಕೇಂದ್ರ ಹಾಗೂ ರಾಜ್ಯದ ಸರ್ಕಾರದ ವಿರುದ್ಧ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ - vijaypur latest protest news

ಪಿಎಂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿದೆ. ದೇಶದ ಯುವಕರಿಗೆ ಉದ್ಯೋಗಗಳನ್ನು ಸೃಷ್ಠಿ ಮಾಡುತ್ತೇವೆ ಎಂದು ಈ ಹಿಂದೆ ಆಶ್ವಾಸನೆ ನೀಡಿದ್ದರು. ಆದರೆ, ಕೇಂದ್ರದಲ್ಲಿ 2ನೇ ಬಾರಿಗೆ ಬಿಜೆಪಿ‌ ಸರ್ಕಾರ ಅಧಿಕಾರಕ್ಕೆ ಬಂದರೂ ಜನರಿಗೆ ನೀಡಿದ ಭರವಸೆಗಳನ್ನ ಈಡೇರಿಸುವ ಕಾರ್ಯಕ್ಕೆ ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

protest by communist party
ಕೇಂದ್ರ ಹಾಗೂ ರಾಜ್ಯದ ಸರ್ಕಾರದ ವಿರುದ್ಧ ಪ್ರತಿಭಟನೆ

By

Published : Jun 16, 2020, 3:11 PM IST

ವಿಜಯಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ಭಾವನೆಗಳಿಗೆ ಧಕ್ಕೆಯಾಗುವ ಯೋಜನೆಗಳನ್ನ ಜಾರಿ ಮಾಡಲು ಹೊರಟಿವೆ. ಅಲ್ಲದೆ ದೇಶದಲ್ಲಿ ಕೊರೊನಾ ವೈರಸ್​​​ನಿಂದ ಜನರು ತತ್ತರಿಸ್ತಿದ್ರೆ, ಇತ್ತ ರಾಜ್ಯ ಸರ್ಕಾರ ರೈತರಿಗೆ ಮಾರಕವಾಗುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿದೆ.

ಪಿಎಂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಖಾಸಗೀಕರಣ ಮಾಡುತ್ತಿದೆ. ದೇಶದ ಯುವಕರಿಗೆ ಉದ್ಯೋಗಗಳನ್ನು ಸೃಷ್ಠಿ ಮಾಡುತ್ತೇವೆ ಎಂದು ಈ ಹಿಂದೆ ಆಶ್ವಾಸನೆ ನೀಡಿದ್ದರು. ಆದರೆ, ಕೇಂದ್ರದಲ್ಲಿ 2ನೇ ಬಾರಿಗೆ ಬಿಜೆಪಿ‌ ಸರ್ಕಾರ ಅಧಿಕಾರಕ್ಕೆ ಬಂದರೂ ಜನರಿಗೆ ನೀಡಿದ ಭರವಸೆಗಳನ್ನ ಈಡೇರಿಸುವ ಕಾರ್ಯಕ್ಕೆ ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಕೇಂದ್ರ ಹಾಗೂ ರಾಜ್ಯದ ಸರ್ಕಾರದ ವಿರುದ್ಧ ಪ್ರತಿಭಟನೆ
ಸರ್ಕಾರ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 7,500 ರೂ.ಗಳನ್ನು ಜಮಾ ಮಾಡಬೇಕು ಹಾಗೂ ದೇಶದಲ್ಲಿ ಯುವಕರಿಗೆ ಉದ್ಯೋಗ ಸೃಷ್ಠಿಸಿಸಬೇಕು. ಕೊರೊನಾ ವೈರಸ್‌ಗೆ ತತ್ತರಿಸಿದ ಜನತೆಗೆ ಆಹಾರದ ಕಿಟ್ ನೀಡಬೇಕು ಹಾಗೂ ಕೇಂದ್ರ ಸರ್ಕಾರ ಜನ ವಿರೋಧಿ ನೀತಿ ಕೈಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ರು.

ABOUT THE AUTHOR

...view details