ವಿಜಯಪುರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ನಗರದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ.. ವಿಜಯಪುರದಲ್ಲಿ ಪೊಲೀಸ್ ಬಿಗಿ ಭದ್ರತೆ - ವಿಜಯಪುರ ಪ್ರತಿಭಟನೆ ನ್ಯೂಸ್
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ನಡೆಸಲಿರುವ ಕರ್ನಾಟಕ ಬಂದ್ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದ್ದರಲ್ಲದೇ, ಅದ್ಹೇಗೆ ಪ್ರತಿಭಟಿಸ್ತಾರೆ ನೋಡೋಣ ಎಂದು ಸವಾಲು ಹಾಕಿದ್ದರು. ಈ ಹಿನ್ನೆಲೆ, ಕನ್ನಡ ಪರ ಸಂಘಟನೆಗಳು ಸವಾಲು ಸ್ವೀಕರಿಸಿ ಇಂದು ವಿಜಯಪುರದಲ್ಲಿ ಪ್ರತಿಭಟನೆಗೆ ನಿರ್ಧರಿಸಿವೆ..
ವಾಟಾಳ್ ನಾಗರಾಜ್ ಹಾಗೂ ವಿವಿಧ ಮುಖಂಡರು 12 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲು ಉದ್ದೇಶಿಸಿರುವ ಹಿನ್ನೆಲೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ನಡೆಸಲಿರುವ ಕರ್ನಾಟಕ ಬಂದ್ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದ್ದರಲ್ಲದೇ, ಅದ್ಹೇಗೆ ಪ್ರತಿಭಟಿಸ್ತಾರೆ ನೋಡೋಣ ಎಂದು ಸವಾಲು ಹಾಕಿದ್ದರು. ಈ ಹಿನ್ನೆಲೆ, ಕನ್ನಡ ಪರ ಸಂಘಟನೆಗಳು ಸವಾಲು ಸ್ವೀಕರಿಸಿ ಇಂದು ವಿಜಯಪುರದಲ್ಲಿ ಪ್ರತಿಭಟನೆಗೆ ನಿರ್ಧರಿಸಿವೆ.
ಬೆಂಗಳೂರಿನಿಂದ ವಿಜಯಪುರ ನಗರಕ್ಕೆ ಆಗಮಿಸುವ ರಾಷ್ಟ್ರೀಯ ಹೆದ್ದಾರಿಯ ಟೋಲ್ ಗೇಟ್, ಸಿಂದಗಿಯಿಂದ ಬರುವ ಬೈಪಾಸ್ ರಸ್ತೆ ಸೇರಿ ವಿಜಯಪುರ ನಗರಕ್ಕೆ ಬರುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ. ವಾಟಾಳ್ ನಾಗರಾಜ್ ಸೇರಿ ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ತಡೆಯುವ ಸಾಧ್ಯತೆಗಳಿವೆ. ನಗರದಲ್ಲಿ ಪ್ರತಿಭಟನೆ ನಡೆಸುವ ಮುನ್ನವೇ ಅವರನ್ನು ತಡೆಯಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.