ಮುದ್ದೇಬಿಹಾಳ (ವಿಜಯಪುರ): ಪಟ್ಟಣದ ಪ್ರಮುಖ ವಾರ್ಡ್ಗಳಲ್ಲಿ ಯುಜಿಡಿ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಪುರಸಭೆ ಸದಸ್ಯರು ಇಂದು ದಿಢೀರ್ ಪ್ರತಿಭಟನೆ ನಡೆಸಿದರು.
ಪುರಸಭೆ ಸದಸ್ಯರಿಂದ ದಿಢೀರ್ ಧರಣಿ: ಯುಜಿಡಿ ಕಾಮಗಾರಿ ವಿಳಂಬಕ್ಕೆ ಆಕ್ರೋಶ - ಮುದ್ದೇಬಿಹಾಳ ಸುದ್ದಿ
ಯುಜಿಡಿ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಪುರಸಭೆ ಸದಸ್ಯರು ಪ್ರತಿಭಟನೆ ನಡೆಸಿದರು. ಯುಜಿಡಿ ಅಧಿಕಾರಿಗಳನ್ನು ಕರೆಯಿಸಿ ಪರಿಶೀಲನೆ ನಡೆಸಿ ಪರಿಹಾರ ಮಾಡಲಾಗುತ್ತದೆ ಎಂದು ಪಿಎಸ್ಐ ಮಲ್ಲಪ್ಪ ಮಡ್ಡಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆದುಕೊಂಡರು.
ಯುಜಿಡಿ ಕಾಮಗಾರಿ ಕುರಿತು ಸಾಕಷ್ಟು ಬಾರಿ ಹೇಳಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸುತ್ತಿಲ್ಲ. ಇತ್ತಿಚೇಗೆ ಜಿಲ್ಲಾಧಿಕಾರಿಗಳು ಪಟ್ಟಣಕ್ಕೆ ಭೇಟಿ ನೀಡಿದ್ದಾಗ ಹದಿನೈದು ದಿನಗಳಲ್ಲಿ ಬಾಕಿ ಇರುವ ಕೆಲಸವನ್ನು ಆರಂಭಿಸುವ ಬಗ್ಗೆ ಭರವಸೆ ನೀಡಿದ್ದರು. ಆದರೆ ಅವರ ಭರವಸೆಯೂ ಹುಸಿಯಾಗಿದೆ. ಮುಖ್ಯಾಧಿಕಾರಿಗಳನ್ನು ಕೇಳಿದರೆ ತಮಗೂ ಇದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ. ಅಲ್ಲದೆ ವರ್ಷಪೂರ್ತಿ ಧರಣಿ ಹೂಡಿ, ನಮಗೇನು ಎಂದು ಬೇಜವಾಬ್ದಾರಿಯಿಂದ ಮಾತನಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ವೇಳೆ ಪಿಎಸ್ಐ ಮಲ್ಲಪ್ಪ ಮಡ್ಡಿ ಸ್ಥಳಕ್ಕೆ ಭೇಟಿ ನೀಡಿ ಕೋವಿಡ್-19 ಪರಿಸ್ಥಿತಿ ಇದ್ದು, ಯಾವುದೇ ಧರಣಿ ಕೂಡಲು ಅವಕಾಶ ಇಲ್ಲ. ಯುಜಿಡಿ ಅಧಿಕಾರಿಗಳನ್ನು ಕರೆಯಿಸಿ ಪರಿಶೀಲನೆ ನಡೆಸಿ ಪರಿಹಾರ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ಪಿಎಸ್ಐ ಭರವಸೆ ಮೇರೆಗೆ ಪುರಸಭೆ ಸದಸ್ಯರು ಪ್ರತಿಭಟನೆ ವಾಪಸ್ ಪಡೆದುಕೊಂಡರು. ಈ ವೇಳೆ ಮುಖ್ಯಾಧಿಕಾರಿ ಗೋಪಾಲ ಕಾಸೆ ಉಪಸ್ಥಿತರಿದ್ದರು.