ಕರ್ನಾಟಕ

karnataka

ETV Bharat / state

ಬಸ್​ನಲ್ಲಿ ಸ್ಥಳಾವಕಾಶದ ಕೊರತೆ... ಹೆಚ್ಚುವರಿ ಬಸ್​ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ -

ಬಸ್ಸಿನಲ್ಲಿ ಸಂಚರಿಸಲು ಹಾಗೂ ಕುಳಿತುಕೊಳ್ಳಲು ಸ್ಥಳಾವಕಾಶ ಇರುವುದಿಲ್ಲ ಎಂದು ಕಳ್ಳಕವಟಗಿ ಊರಿನ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಬಸ್​ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು

By

Published : Jul 20, 2019, 4:30 AM IST

ವಿಜಯಪುರ:ಬಸ್​​ನಲ್ಲಿ ಕುಳಿತುಕೊಳ್ಳಲು ಸೀಟು ದೊರೆತಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಬಸ್​ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಜಿಲ್ಲೆಯ ತಿಕೋಟಾ, ವಿಜಯಪುರ ನಗರದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿ ಪ್ರತಿದಿನ ಬೆಳಿಗ್ಗೆ 120ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಾರೆ. ಬಸ್ ಕಳ್ಳಕವಟಗಿಗೆ ಬರುವ ವೇಳೆಗಾಗಲೇ ಸಂಪೂರ್ಣ ಭರ್ತಿಯಾಗಿ ಬಸ್ಸಿನಲ್ಲಿ ಸ್ಥಳಾವಕಾಶ ಇಲ್ಲದ ಹಿನ್ನೆಲೆಯಲ್ಲಿ ಕಳ್ಳಕವಟಗಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಮೂರು ಗಂಟೆಗಳ ಕಾಲ ಬಸ್ ತಡೆದ ವಿದ್ಯಾರ್ಥಿಗಳು ಪ್ರತಿದಿನ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸಲು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆ ಮತ್ತೊಂದು ಬಸ್ಸನ್ನು ಎನ್‌ಇಕೆಆರ್‌ಟಿಸಿ ಅಧಿಕಾರಿಗಳು ಕಳುಹಿಸಿಕೊಟ್ಟು ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಿದರು.

For All Latest Updates

TAGGED:

ABOUT THE AUTHOR

...view details