ವಿಜಯಪುರ: ರೈತರ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡುವಂತೆ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಜಯಪುರ: ರೈತರ ಜಮೀನುಗಳಿಗೆ ಹೋಗಲು ದಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ - vijayapura leatest news
ರೈತರು ಜಮೀನುಗಳಿಗೆ ಹೋಗಿ ಕೃಷಿ ಚಟುವಟಿಕೆ ನಡೆಸಲು ಕಷ್ಟವಾಗಿದೆ. ನಕ್ಷೆಯಲ್ಲಿ ಜಮೀನುಗಳಿಗೆ ಹೋಗಲು ದಾರಿ ಗುರುತಿಸಿದರೂ, ಕೆಲವು ಜಮೀನು ಮಾಲೀಕರು ರೈತರಿಗೆ ಹೋಗಲು ದಾರಿ ನೀಡುತ್ತಿಲ್ಲ. ಹೀಗಾಗಿ ಅನೇಕ ರೈತರು ಪರದಾಟ ನಡೆಸುತ್ತಿದ್ದಾರೆ.
ನಗರದ ಅಂಬೇಡ್ಕರ್ ವೃತ್ತದಿಂದ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿವರೆಗೂ ಪಾದಯಾತ್ರೆ ಕೈಗೊಂಡರು. ಜಿಲ್ಲೆಯ ರೈತರು ಜಮೀನುಗಳಿಗೆ ಹೋಗಿ ಕೃಷಿ ಚಟುವಟಿಕೆ ನಡೆಸಲು ಕಷ್ಟವಾಗಿದೆ. ನಕ್ಷೆಯಲ್ಲಿ ಜಮೀನುಗಳಿಗೆ ಹೋಗಲು ದಾರಿ ಗುರುತಿಸಿದರೂ, ಕೆಲವು ಜಮೀನು ಮಾಲೀಕರು ರೈತರಿಗೆ ಹೋಗಲು ದಾರಿ ನೀಡುತ್ತಿಲ್ಲ. ಹೀಗಾಗಿ ಅನೇಕ ರೈತರು ಪರದಾಟ ನಡೆಸುತ್ತಿದ್ದು, ಹಲವು ಬಾರಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ದಾರಿ ಮಾಡುವಂತೆ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಆಕ್ರೋಶ ಹೊರಹಾಕಿದರು.
ರಾಜ್ಯ ಬಿಜೆಪಿ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸುವ ಕಾರ್ಯಕ್ಕೆ ಮುಂದಾಗಿಲ್ಲ. ಕಾರ್ಪೊರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದ್ದು, ಜಿಲ್ಲೆಯ ರೈತರ ದಾರಿ ಸಮಸ್ಯೆ ಇತ್ಯರ್ಥ ಮಾಡದಿದ್ದರೆ ಉಗ್ರ ಹೋರಾಟ ಕೈಕೊಳ್ಳುವುದಾಗಿ ರೈತರು ಎಚ್ಚರಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.