ವಿಜಯಪುರ:ಸ್ನೇಹ ಸದನ ಖಾಸಗಿ ವಸತಿ ಶಾಲೆಯಲ್ಲಿ ಓದುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿವೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಸೂಳಕೋಡ ಗ್ರಾಮದ ಆಕಾಶ್ ಕುಂಬಾರ(13) ಮೃತ ಬಾಲಕ. ನಿನ್ನೆ ಶಾಲೆಗೆ ಹೋಗಿದ್ದ ಆಕಾಶ್ ಬೆಳಗ್ಗೆ ಅಸ್ವಸ್ಥನಾಗಿದ್ದ. ಆದರೆ ಶಾಲಾ ಆಡಳಿತ ಮಂಡಳಿಯವರು ಮಧ್ಯಾಹ್ನ ಬಾಲಕನ ಪಾಲಕರಿಗೆ ಕರೆ ಮಾಡಿ ನಿಮ್ಮ ಮಗನಿಗೆ ಹುಷಾರಿಲ್ಲ ಎಂದು ಮಾಹಿತಿ ನೀಡಿದ್ದರು. ಅವರು ಬಂದು ಮಗನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಆತ ಸಾವನ್ನಪ್ಪಿದ್ದಾನೆ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ.