ಮುದ್ದೇಬಿಹಾಳ: ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಗ್ರೇಡ್-2 ತಹಶೀಲ್ದಾರ್ ಡಿ.ಜಿ. ಕಳ್ಳಿಮನಿ ಕರ್ತವ್ಯ ಲೋಪವೆಸಗಿದ ಆರೋಪ ಕೇಳಿ ಬಂದಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಗ್ರೇಡ್- 2 ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ - ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮುದ್ದೇಬಿಹಾಳ ಗ್ರೇಡ್-2 ತಹಶೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾಜಿ ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ನೇತೃತ್ವದಲ್ಲಿ ತಹಶೀಲ್ದಾರ್ ಜಿ.ಎಸ್. ಮಳಗಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪಟ್ಟಣದ ಮಿನಿ ವಿಧಾನಸೌಧದ ಬಳಿ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ತಹಶೀಲ್ದಾರ್ ಜಿ.ಎಸ್. ಮಳಗಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಅವರು, ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ಡಿ.ಜಿ. ಕಳ್ಳಿಮನಿ ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ರಾಜಕೀಯ ವ್ಯಕ್ತಿಗಳ ಪ್ರಭಾವಕ್ಕೊಳಗಾಗಿ ಲಕ್ಷೀಬಾಯಿ ಹವಾಲ್ದಾರ ಅವರ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿದ್ದಾರೆ ಎಂದು ಆರೋಪಿದರು.
ಈ ಸಂದರ್ಭದಲ್ಲಿ ತಾ.ಪಂ. ಸದಸ್ಯರಾದ ಶ್ರೀಶೈಲ ಮರೋಳ, ಎಪಿಎಂಸಿ ಮಾಜಿ ಅಧ್ಯಕ್ಷ ಗುರು ತಾರನಾಳ, ನೀಲಕಂಠರಾವ ನಾಡಗೌಡ(ಅಪ್ಪು), ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಕೆ.ಬಿರಾದಾರ, ಮುಖಂಡ ಮಲ್ಲಿಕಾರ್ಜುನ ಮದರಿ, ರಾಹುಲ್ ನಾಡಗೌಡ, ನ್ಯಾಯವಾದಿ ಎಸ್.ಎಸ್. ಮಾಲಗತ್ತಿ, ಚಿನ್ನು ನಾಡಗೌಡ, ಮುತ್ತಿನಶೆಟ್ಟಿ ಗೂಳಿ, ಸಂತೋಷ ಚವ್ಹಾಣ (ಹುಲ್ಲೂರ), ಬಾಪುರಾವ ದೇಸಾಯಿ, ಪುರಸಭೆ ಸದಸ್ಯ ಮಹಿಬೂಬ ಗೊಳಸಂಗಿ, ವೈ.ಹೆಚ್. ವಿಜಯಕರ್, ಸಂಗಯ್ಯ ಸಾರಂಗಮಠ, ಮಾಜಿ ಸದಸ್ಯ ಕಾಮರಾಜ ಬಿರಾದಾರ, ಸದ್ದಾಂ ಕುಂಟೋಜಿ, ರಫೀಕ ಶಿರೋಳ, ಬಿ.ಕೆ.ಬಿರಾದಾರ, ಹುಸೇನ ಮುಲ್ಲಾ, ಲಕ್ಷ್ಮಣ ಲಮಾಣಿ ಮತ್ತಿತರರು ಉಪಸ್ಥಿತರಿದ್ದರು.