ವಿಜಯಪುರ:ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ಕಾಯ್ದೆ ಜಾರಿ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ವಿಜಯಪುರದಲ್ಲಿ ಪ್ರತಿಭಟನೆ! - vijayapura protest latest news
ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
![ಪೌರತ್ವ ಕಾಯ್ದೆ ಜಾರಿ ವಿರೋಧಿಸಿ ವಿಜಯಪುರದಲ್ಲಿ ಪ್ರತಿಭಟನೆ! Protest in Vijayapura against citizenship act](https://etvbharatimages.akamaized.net/etvbharat/prod-images/768-512-5825410-thumbnail-3x2-protest.jpg)
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಎನ್.ಆರ್.ಸಿ, ಸಿ.ಎ.ಎ, ಎನ್.ಪಿ.ಆರ್ ಕಾಯ್ದೆಗಳು ದೇಶ ವಿರೋಧಿಯಾಗಿವೆ. ಕಾಯ್ದೆ ಜಾರಿಯಿಂದ ನರೇಂದ್ರ ಮೋದಿ ಅಮಿತಾ ಶಾ ಜನರ ಮೇಲೆ ಬ್ರಾಹ್ಮಣತ್ವವನ್ನ ಹೇರಲು ಹೊರಟಿದ್ದಾರೆ. ಸಂವಿಧಾನ ವಿರೋಧಿ ಕಾಯ್ದೆ ವಿರುದ್ಧ ದೇಶದ ಜನತೆ ಪ್ರತಿಭಟನೆ ನಡೆಸುವಂತಾಗಿದೆ. ಅಷ್ಟೇ ಅಲ್ಲದೆ ಸಿಎಎ ಕಾಯ್ದೆ ದೇಶದ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಗಮನ ನೀಡಲಿ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿದೆ, ಯುವ ಜನತೆ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಸಿಎಎ, ಎನ್‌ಆರ್‌ಸಿ ಕಾಯ್ದೆ ರದ್ದುಗೊಳಿಸಿ ಅಭಿವೃದ್ಧಿ ಯೋಜನೆ ಜಾರಿ ತರುವಂತೆ ಪ್ರತಿಭಟನಾ ಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.