ಕರ್ನಾಟಕ

karnataka

ETV Bharat / state

ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣಕ್ಕೆ ಖಂಡನೆ:ವಿಜಯಪುರದಲ್ಲಿ ಮೌನ ಪ್ರತಿಭಟನೆ - undefined

ಅತ್ಯಾಚಾರಕ್ಕೊಳಗಾದ ಯುವತಿ ಕುಟಂಬಕ್ಕೆ ನ್ಯಾಯ ಒದಗಿಸುವ ಕಾರ್ಯ ಉತ್ತರ ಪ್ರದೇಶ ಸರ್ಕಾರ ಮಾಡಬೇಕು. ಜೊತೆಗೆ ಯುವತಿ ಕುಟುಂಬಕ್ಕೆ ಪರಿಹಾರ ಧನ ನೀಡುವಂತೆ ಫಲಕ ಪ್ರದರ್ಶನದ ಮೂಲಕ ಪ್ರತಿಭಟನಾಕಾರರು ಆಗ್ರಹಿಸಿದರು.

Protest news in Vijayapura ವಿಜಯಪುರದಲ್ಲಿ ಪ್ರತಿಭಟನೆ ಸುದ್ದಿ
Protest news in Vijayapura ವಿಜಯಪುರದಲ್ಲಿ ಪ್ರತಿಭಟನೆ ಸುದ್ದಿ

By

Published : Oct 2, 2020, 5:06 PM IST

ವಿಜಯಪುರ: ಯುವತಿ ಮೇಲೆ ಅತ್ಯಾಚಾರ ನಡೆಸಿ ಚಿತ್ರಹಿಂಸೆ‌ ನೀಡಿದ‌ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಉತ್ತರ ಪ್ರದೇಶದ 19 ವರ್ಷ ಯುವತಿ ಮೇಲೆ ಅತ್ಯಾಚಾರ ಖಂಡಿಸಿ ಮಹಿಳಾ ದೌರ್ಜನ್ಯ ವಿರೋಧಿ ಸಂಘಟನೆ ಕಾರ್ಯಕರ್ತರು, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲದಂತಾಗಿದ್ದು, ಉತ್ತರ ಪ್ರದೇಶದಲ್ಲಿ ಯುವತಿಯರು ಮನೆಯಿಂದ ಹೊರಹೋಗಲು ಹೆದರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡುವ ಕಾನೂನು ರೂಪಿಸುವಂತೆ ಒತ್ತಾಯಿಸಿದರು. ಅತ್ಯಾಚಾರಕ್ಕೊಳಗಾದ ಯುವತಿ ಕುಟಂಬಕ್ಕೆ ನ್ಯಾಯ ಒದಗಿಸುವ ಕಾರ್ಯ ಉತ್ತರ ಪ್ರದೇಶ ಸರ್ಕಾರ ಮಾಡಬೇಕು. ಜೊತೆಗೆ ಯುವತಿ ಕುಟುಂಬಕ್ಕೆ ಪರಿಹಾರ ಧನ ನೀಡುವಂತೆ ಫಲಕ ಪ್ರದರ್ಶನದ ಮೂಲಕ ಪ್ರತಿಭಟನಾಕಾರರು ಆಗ್ರಹಿಸಿದರು.

For All Latest Updates

TAGGED:

ABOUT THE AUTHOR

...view details