ವಿಜಯಪುರ: ಹಥ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘ ಹಾಗೂ ದಲಿತಪರ, ಕನ್ನಡಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಿದವು.
ಉತ್ತರಪ್ರದೇಶದಲ್ಲಿ ಮಹಿಳೆಯರಿಗೆ, ಯುವತಿಯರಿಗೆ ರಕ್ಷಣೆಯಿಲ್ಲದಂತಾಗಿದ್ದು, ಕಳೆದ ಹಲವು ವರ್ಷಗಳಿಂದ ದಲಿತರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದರೂ ಯೋಗಿ ಸರ್ಕಾರ ಮಾತ್ರ ಕಡಿವಾಣ ಹಾಕಲು ಮುಂದಾಗಿಲ್ಲ ಎಂದು ಪ್ರತಿಭಟನಾಕಾರು ಆಕ್ರೋಶ ಹೊರಹಾಕಿದರು.
ಹಥ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಪ್ರಕರಣದ ಹಿಂದೆ ಕಾಣದ ಕೈಗಳು ಕೆಲಸ ಮಾಡಿ, ಪ್ರಕರಣ ಮುಚ್ಚಿ ಹಾಕುವ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.
ಯುವತಿ ಶವವನ್ನು ಪೋಷಕರಿಗೆ ಹಸ್ತಾಂತರ ಮಾಡದೆ ಅಲ್ಲಿನ ಜಿಲ್ಲಾಡಳಿತವೇ ಯುವತಿವ ಅಂತ್ಯ ಸಂಸ್ಕಾರ ಮಾಡಿರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ತಕ್ಷಣವೇ ಯುಪಿ ಸರ್ಕಾರ ಪ್ರಕರಣದ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ 10ಕ್ಕೂ ಅಧಿಕ ಸಂಘಟನೆಗಳಿಂದ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.