ವಿಜಯಪುರ: ಪರಿವಾರ ಹಾಗೂ ತಳವಾರ ಸಮುದಾಯಗಳಿಗೆ ಎಸ್‌ಟಿ ಪ್ರಮಾಣ ಪತ್ರ ನೀಡಲು ಸ್ಥಳೀಯ ಶಾಸಕರು ಸದನದಲ್ಲಿ ಚರ್ಚಿಸುವಂತೆ ಒತ್ತಾಯಿಸಿ ತಳವಾರ ಸಮೂಹ ಸೇವಾ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಳವಾರ,ಪರಿವಾರ ಸಮುದಾಯಗಳಿಗೆ ಎಸ್‌ಟಿ ಪ್ರಮಾಣ ಪತ್ರ ನೀಡಲು ಒತ್ತಾಯ - ಶಾಸಕ ಬಸನಗೌಡ ಪಾಟೀಲ ಯತ್ನಾಳ್
ಪರಿವಾರ ಹಾಗೂ ತಳವಾರ ಸಮುದಾಯಗಳಿಗೆ ಎಸ್‌ಟಿ ಪ್ರಮಾಣ ಪತ್ರ ನೀಡಲು ಸ್ಥಳೀಯ ಶಾಸಕರು ಸದನದಲ್ಲಿ ಚರ್ಚಿಸುವಂತೆ ಒತ್ತಾಯಿಸಿ ತಳವಾರ ಸಮೂಹ ಸೇವಾ ಸಂಘದ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕಳೆದ ಹಲವು ದಿನಗಳಿಂದ ಪರಿವಾರ ಹಾಗೂ ತಳವಾರ ಸಮುದಾಯಗಳಿಗೆ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಅನೇಕ ಬಾರಿ ಪ್ರತಿಭಟನೆ ನಡೆಸಿದರೂ, ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಈ ಪ್ರಮಾಣ ಪತ್ರ ವಿದ್ಯಾರ್ಥಿಗಳ ಶೈಕ್ಷಣಿಕ ವಿಷಯಕ್ಕೆ ಸಹಾಯಕವಾಗಲಿದೆ. ಬಡವರಿಗೆ ಕೂಡ ಪ್ರಮಾಣ ಪತ್ರದಿಂದ ಸರ್ಕಾರಿ ಸೌಲಭ್ಯ ಪಡೆಯಲು ಉಪಯೋಗವಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿವಾರ ಹಾಗೂ ತಳವಾರ ಸಮುದಾಯಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ಆದೇಶ ಮಾಡಿದ್ದಾರೆ. ಆದ್ರೆ ಕೆಲವು ಕಾಣದ ಕೈಗಳು ಸಮುದಾಯಗಳಿಗೆ ಪ್ರಮಾಣ ಪತ್ರ ನೀಡದಂತೆ ತಡೆವೊಡ್ಡಿದ್ದಕ್ಕೆ ಫಲಾನುಭವಿಗಳಿಗೆ ವಂಚನೆಯಾಗುತ್ತಿದೆ ಎಂದು ಕಿಡಿ ಕಾರಿದರು.
ಸೆಪ್ಟೆಂಬರ್ 21ರಂದು ಸದನದ ಪ್ರಶ್ನೋತ್ತರ ಅವಧಿಯಲ್ಲಿ ಸಮುದಾಯಗಳಿಗೆ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಬೇಕು ಎಂದು ಹೇಳಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ಗೆ ಮನವಿ ಸಲ್ಲಿಸಿದರು.