ಕರ್ನಾಟಕ

karnataka

ETV Bharat / state

ವಿಜಯಪುರ: ಸಿಂಧೋಳ್ಳು ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - ಸಿಂಧೋಳ್ಳು ಸಮಾಜ ಕಲ್ಯಾಣ ಸಂಘದ ಕಾರ್ಯಕರ್ತರು

ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಮೈಗೆ ಬಾರುಕೋಲಿನಿಂದ ಹೊಡೆದುಕೊಳ್ಳುವ ಸಿಂಧೋಳ್ಳು ಸಮಾಜ ಕಲ್ಯಾಣ ಸಂಘದ ಕಾರ್ಯಕರ್ತರು ವಿನೂತನಾಗಿ ಪ್ರತಿಭಟನೆ ನಡೆಸಿದರು.

Protest in Vijaypur
ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

By

Published : Sep 24, 2020, 4:22 PM IST

ವಿಜಯಪುರ: ಸಿಂಧೋಳ್ಳು ಜನಾಂಗಕ್ಕೆ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಮೈಗೆ ಬಾರು ಕೋಲಿನಿಂದ ಹೊಡೆಕೊಳ್ಳುವ ಮೂಲಕ ಸಿಂಧೋಳ್ಳು ಸಮಾಜ ಕಲ್ಯಾಣ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.

ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ನಗರದ ಅಂಬೇಡ್ಕರ್ ವೃತ್ತದಲ್ಲಿ ಮೈಗೆ ಬಾರುಕೋಲಿನಿಂದ ಹೊಡೆದುಕೊಳ್ಳುವ ಮೂಲಕ ವಿನೂತನಾಗಿ ಪ್ರತಿಭಟಿಸಿದ ಕಾರ್ಯಕರ್ತರು ಸಿಂಧೋಳ್ಳು ಜನಾಂಗಕ್ಕೆ ಸರ್ಕಾರ ಜಾತಿ ಪ್ರಮಾಣ ಪತ್ರ ನೀಡುವಂತೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ರು ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಪ್ರಮಾಣ ಪತ್ರ ಅಧಿಕಾರಿಗಳು ನೀಡುತ್ತಿಲ್ಲ. ಹೀಗಾಗಿ ಸಮುದಾಯಕ್ಕೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಹಿನ್ನಡೆಯಾಗುತ್ತಿದ್ದು, ಸರ್ಕಾರಿ ಸೌಲಭ್ಯಗಳಿಂದ ವಂಚಿರಾಗುತ್ತಿದ್ದಾರೆ. ಹಲವು ಬಾರಿಗೆ ತಾಲೂಕು ಮಟ್ಟದ ಅಧಿಕಾರಿಗಳು ಪ್ರಮಾಣ ಪತ್ರ ನೀಡುವಂತೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಇನ್ನು ಒಂದು ವಾರದ ಒಳಗಾಗಿ ವಿಜಯಪುರ ಜಿಲ್ಲೆಯಲ್ಲಿ ವಾಸಿಸುವ ಸಿಂಧೋಳ್ಳು ಜನಾಂಗಕ್ಕೆ (ದುರುಗಮುರಗಿ ಪೋತರಾಜ) ಜಾತಿ ಪ್ರಮಾಣ ಪತ್ರ ನೀಡುವಂತೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details