ವಿಜಯಪುರ :ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಖಾಲಿ ಹುದ್ದೆ ಭರ್ತಿ ಮಾಡುವಂತೆ ಒತ್ತಾಯಿಸಿ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ದೇಶದಲ್ಲಿ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅನೇಕ ವಿದ್ಯಾವಂತರು ಕೆಲಸಕ್ಕಾಗಿ ಪರದಾಟ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಖಾಲಿ ಹುದ್ದೆಗಳ ಭರ್ತಿಗೆ ಮುಂದಾಗುತ್ತಿಲ್ಲ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 3.50 ಕೋಟಿ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.40 ಲಕ್ಷ ಹುದ್ದೆಗಳು ಖಾಲಿ ಇವೆ.