ಕರ್ನಾಟಕ

karnataka

ETV Bharat / state

ಅಂಬೇಡ್ಕರ್​​ ಕುರಿತ ಗೊಂದಲದ ಸುತ್ತೋಲೆ ವಿಚಾರ: ಸಚಿವರನ್ನು ವಜಾಗೊಳಿಸುವಂತೆ ಪ್ರತಿಭಟನೆ - ಡಿಎಸ್ ಎಸ್ ಕಾರ್ಯಕರ್ತರಿಂದ ವಿಜಯಪುರದಲ್ಲಿ ಪ್ರತಿಭಟನೆ

ಡಾ. ಬಿ.ಆರ್ ಅಂಬೇಡ್ಕರ್‌ ಅವರನ್ನು ಅವಮಾನಿಸಿರುವ ಆರೋಪಕ್ಕೆ ಗುರಿಯಾಗಿರುವ ಶಿಕ್ಷಣ ಇಲಾಖೆ ನಡೆ ವಿರುದ್ಧ ತಿರುಗಿಬಿದ್ದಿರುವ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶಿಕ್ಷಣ ಸಚಿವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ಕೂಡಲೆ ವಜಾಗೂಳಿಸುವಂತೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತ ಕಾರ್ಯಕರ್ತರು

By

Published : Nov 21, 2019, 7:01 PM IST

ವಿಜಯಪುರ:ಡಾ. ಬಿ.ಆರ್ ಅಂಬೇಡ್ಕರ್‌ ಅವರನ್ನು ಅವಮಾನಿಸಿರುವ ಆರೋಪಕ್ಕೆ ಗುರಿಯಾಗಿರುವ ಶಿಕ್ಷಣ ಇಲಾಖೆ ನಡೆ ವಿರುದ್ಧ ತಿರುಗಿಬಿದ್ದಿರುವ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಶಿಕ್ಷಣ ಸಚಿವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ಕೂಡಲೆ ವಜಾಗೂಳಿಸುವಂತೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತ ಕಾರ್ಯಕರ್ತರು

ನಗರದ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಡಿಎಸ್ ಎಸ್ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಭಾರತ ಸಂವಿಧಾನವನ್ನು ಡಾ.ಬಿ ಆರ್ ಅಂಬೇಡ್ಕರ್ ಒಬ್ಬರೆ ರಚಿಸಿಲ್ಲ. ಬೇರೆ ಬೇರೆ ಸಮಿತಿಗಳು ಬರಿದಿದ್ದನ್ನು ಒಟ್ಟುಗೂಡಿಸಿ ಸಂವಿಧಾನದ ಅಂತಿಮ‌ ಕರಡನ್ನು ತಯಾರಿಸಿದ್ದಾರೆ ಎಂಬದನ್ನು ಮಕ್ಕಳ ಪಠ್ಯದಲ್ಲಿ ಅಳವಡಿಸಿಲು ಹೊರಟಿದ್ದಾರೆ ಎಂದು ರಾಜ್ಯ ಬಿಜೆಪಿ‌ ಸರ್ಕಾರದ ವಿರುದ್ದ ಡಿಎಸ್ ಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪಾದಯಾತ್ರೆ ನಡಿಸಿದ ಕಾರ್ಯಕರ್ತರು, ಶಿಕ್ಷಣ ಸಚಿವ ಸುರೇಶ ಕುಮಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯದರ್ಶಿ ಉಮಾಶಂಕರ ಇಬ್ಬರನ್ನು ಈ ಕೂಡಲೇ ವಜಾಗೊಳಿಸಬೇಕೆಂದು‌ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ‌ಮನವಿ ಸಲ್ಲಿಸಿದರು.

ABOUT THE AUTHOR

...view details