ವಿಜಯಪುರ:ನಿರುದ್ಯೋಗ ಸಮಸ್ಯೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ಭೂಪಾಲ್ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಎಐಡಿವೈಒ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಭೂಪಾಲ್‌ನ ಪ್ರತಿಭಟನಾಕಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ - vijyapura protest news
ನಿರುದ್ಯೋಗ ಸಮಸ್ಯೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ಭೂಪಾಲ್ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಎಐಡಿವೈಒ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರು, ಮಧ್ಯಪ್ರದೇಶದ ಬಿಜೆಪಿ ಸರ್ಕಾರವು ಸೆ. 4ರಂದು ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ಕ್ರೂರ ಲಾಠಿ ಚಾರ್ಜ್ ಮಾಡಿದೆ. ಪ್ರತಿಭಟನಾಕಾರು ನಿರುದ್ಯೋಗ ಸಮಸ್ಯೆ ವಿರುದ್ಧ ಧ್ವನಿ ಎತ್ತಿದ ವೇಳೆ ಮಧ್ಯಪ್ರದೇಶ ಸರ್ಕಾರ ಯುವಕರಿಗೆ ಲಾಠಿ ಚಾರ್ಜ್ ಮಾಡಿರೋದು ಸರಿಯಲ್ಲ. ಎಸ್‌ಎಸ್‌ಸಿ, ರೈಲ್ವೆ, ಪೊಲೀಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ಗೆ ಅಹವಾಲು ನೀಡಲು ಮುಂದಾಗಿದ್ದರು. ಆದ್ರೆ ಪೊಲೀಸರು ಕ್ರೂರವಾಗಿ ಲಾಠಿ ಚಾರ್ಜ್ ಮಾಡಿರುವುದನ್ನು ಪ್ರತಿಭಟನಾಕಾರರು ಖಂಡಿಸಿದ್ದಾರೆ.
ಕ್ರೂರವಾಗಿ ಲಾಠಿ ಚಾರ್ಜ್ ನಡೆಸಲು ಕಾರಣವಾದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಶಾಂತಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಎಐಡಿವೈಒ ಸಂಘಟನೆ ಕಾರ್ಯಕರ್ತರ ಮೇಲೆ ಸುಳ್ಳು ಆರೋಪದಡಿ ದಾಖಲಿಸಿದ ಎಫ್‌ಐಆರ್ ಹಿಂಪಡೆದು ಖಾಲಿ ಇರುವ ಹುದ್ದೆಗಳಿಗೆ ಶೀಘ್ರವಾಗಿ ನೇಮಕಾತಿ ಮಾಡುವಂತೆ ಕೋರಿ ಪ್ರತಿಭಟನಾಕಾರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.