ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ, ಪ್ರಗತಿಪರ ಸಂಘಟನೆಗಳ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ವಿಜಯಪುರದಲ್ಲಿ ಪ್ರತಿಭಟನೆ - Protests in Vijayapura
ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ, ಪ್ರಗತಿಪರ ಸಂಘಟನೆಗಳ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್. ಎಸ್ ದೊರೆಸ್ವಾಮಿ ಪಾಕ್ ಏಜೆಂಟ್ ಎಂದು ಹೇಳಿ, ಯತ್ನಾಳ ಅವರು ದೊರೆಸ್ವಾಮಿ ಅವರನ್ನು ಅಪಮಾನ ಮಾಡಿದ್ದಾರೆ. ಇದನ್ನು ರಾಜ್ಯದ ಜನರು ವಿರೋಧಿಸುತ್ತಿದ್ದಾರೆ. ಪಾಕ್ ಏಜೆಂಟ್ ಎಂದು ಹೇಳಿಕೆ ನೀಡಿ ದೊರೆಸ್ವಾಮಿಯವರ ಗೌರವಕ್ಕೆ ಧಕ್ಕೆ ತಂದ ಶಾಸಕ ಯತ್ನಾಳ ಮೇಲೆ ಸರ್ಕಾರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಇಂದಿಗೂ ಹೋರಾಟಗಾರ ದೊರೆಸ್ವಾಮಿ ಸಮಾಜದ ಮೂಲಭೂತ ಸಮಸ್ಯೆಗಳ ಬಗ್ಗೆ ಬಹಿರಂಗವಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ. ಹಾಗೂ ಸ್ವಾತಂತ್ರ್ಯ ಹೋರಾಟಗಾರದಲ್ಲಿ ಗಾಂಧಿ ಬಳಗದಲ್ಲಿ ಗುರುತಿಸಿಕೊಂಡ ವ್ಯಕ್ತಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಯತ್ನಾಳ ಮೇಲೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.