ವಿಜಯಪುರ:ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಲಾಕ್‌ಡೌನ್ ಅವಧಿಯ ವೇತನ ಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯದ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಲಾಕ್‌ಡೌನ್ ಅವಧಿಯ ವೇತನ ಪಾವತಿಸಲು ಆಗ್ರಹಿಸಿ ಪ್ರತಿಭಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ವಸತಿ ನಿಲಯದ ಹೊರಗುತ್ತಿಗೆ ನೌಕಕರು, ಕಳೆದ ಹಲವು ದಿನಗಳಿಂದ ವಸತಿ ನಿಲಯಗಳಲ್ಲಿ ಹೊರ ಗುತ್ತಿಗೆದಾರವಾಗಿ ಕಾರ್ಯನಿರ್ವಹಿಸುವ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.
ಲಾಕ್‌ಡೌನ್ ಅವಧಿಯಲ್ಲಿ ಎಲ್ಲಾ ವಸತಿ ನಿಲಯಗಳು ಬಂದ್ ಆಗಿವೆ. ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ನೌಕರಿ ನಂಬಿಕೊಂಡು ಬದುಕು ಕಟ್ಟಿಕೊಂಡ ಹೊರ ಗುತ್ತಿಗೆ ನೌಕಕರು ಕಷ್ಟದಲ್ಲಿದ್ದಾರೆ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ಹೊರ ಹಾಕಿದರು.
ಹಲವು ಬಾರಿ ವೇತನ ಪಾವತಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಇದುವರೆಗೂ ಹಾಸ್ಟೆಲ್‌ಗಳು ಮರು ಆರಂಭಗೊಳ್ಳದಿರೋದು ಹಾಸ್ಟೆಲ್ ಕಾರ್ಮಿಕರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿವೆ. ಸರ್ಕಾರ ಬಾಕಿ ವೇತನ ನೀಡಲು ಮುಂದಾಗಬೇಕು.
ಹೆಚ್ಚುವರಿ ಸಿಬ್ಬಂದಿ ಹೆಸರಿನಲ್ಲಿ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ ಖಾಲಿ ಇರುವ ಕಡೆಗೆ ಕೆಲಸ ನೀಡುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.