ವಿಜಯಪುರ:ಪಿಎಸ್ಐ ನೇಮಕಾತಿಯಲ್ಲಿ ಮರು ಪರೀಕ್ಷೆ ನಡೆಸುವುದು ಸೂಕ್ತವಾಗಿದೆ ಎಂದು ಎಂ.ಬಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮರು ಪರೀಕ್ಷೆ ಮಾಡುವುದಾಗಿ ಸರ್ಕಾರ ಹೇಳಿರುವುದನ್ನು ನಾನು ಸ್ವಾಗತ ಮಾಡುತ್ತೇನೆ. ಆದ್ರೆ ಪಿಎಸ್ಐ ಪರೀಕ್ಷೆ ಬರೆದ ವಿದ್ಯಾರ್ಥಿಗಳು, ಅವರ ಪಾಲಕರಿಗೆ ನೋವು ಆಗುತ್ತದೆ. ಆದ್ರೂ ವಿದ್ಯಾರ್ಥಿಗಳು ಸಹಕಾರ ನೀಡಬೇಕು ಎಂದರು.
ಭಾಷೆ ವಿವಾದ: ಹಿಂದಿ ರಾಷ್ಟ್ರೀಯ ಭಾಷೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ, ಅಜಯ್ ದೇವಗನ್ಗೆ ಬುದ್ಧಿ ಇಲ್ಲ, ಸುದೀಪ್ ಹೇಳಿರುವುದು ಸರಿಯಾಗಿದೆ. ಕನ್ನಡ ನಮ್ಮ ಮಾತೃಭಾಷೆ, ಅದಕ್ಕೆ ಅದರದೇ ಸ್ಥಾನಮಾನವಿದೆ. ಹಿಂದಿ ಭಾಷೆಯನ್ನು ಮಹಾರಾಷ್ಟ್ರ, ತಮಿಳುನಾಡು ಸೇರಿ ಯಾರೂ ಒಪ್ಪಿ ಕೊಳ್ಳುವುದಿಲ್ಲ ಎಂದು ಹೇಳಿದರು.